Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತ ಸೋಲುತ್ತದೆ, ಕೊಹ್ಲಿ ರನ್ ಬಾರಿಸಲ್ಲ'; ಸುಳ್ಳಾಯ್ತು ಐಐಟಿ ಬಾಬಾ ನುಡಿದಿದ್ದ ಭವಿಷ್ಯ

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ವೇಜ್ ಕದನ ಭಾರತೀಯ ಅಭಿಮಾನಿಗಳು ನಿರೀಕ್ಷಿಸಿದ ರೀತಿಯಲ್ಲೇ ಅಂತ್ಯಗೊಂಡಿದೆ. ಪಾಕಿಸ್ತಾನ ವಿರುದ್ಧದ ಈ ಪಂದ್ಯ ಟೀಂ ಇಂಡಿಯಾ ಅಭಿಮಾನಿಗಳಿಗೆ ಡಬಲ್ ಸಂತಸ ತಂದುಕೊಂಡಿದೆ.

ಎರಡನೇಯದ್ದು, ಚೇಸ್ ಮಾಸರ್ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ತಮ್ಮ ಶತಕಗಳ ಬರವನ್ನು ನೀಗಿಸಿಕೊಂಡಿದ್ದಾರೆ. ಈವೆರಡರ ಜೊತೆಗೆ ಟೀಂ ಇಂಡಿಯಾ ಅಭಿಮಾನಿಗಳಿಗೆ ಸಿಕ್ಕ ಇನ್ನೊಂದು ಸಂತಸದ ಸುದ್ದಿಯೆಂದರೆ ಕುಂಭಮೇಳದಲ್ಲಿ ಐಐಟಿ ಬಾಬಾ (ಅಭಯ್ ಸಿಂಗ್) ನುಡಿದಿದ್ದ ಭವಿಷ್ಯ ಸುಳ್ಳಾಗಿದೆ.

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹೈವೋಲ್ವೇಜ್ ಕದನ ನಡೆಯುವುದಕ್ಕೆ ಕೆಲವು ದಿನಗಳ ಮುನ್ನ ಐಐಟಿ ಬಾಬಾ ಖಾಸಗಿ ಯುಟ್ಯೂಬ್ ಚಾನೆಲ್‌ಗೆ ನೀಡಿದ್ದ ಸಂದರ್ಶನದಲ್ಲಿ ಈ ಉಭಯ ತಂಡಗಳ ನಡುವಿನ ಕದನದ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಏನಾಗಿತ್ತು ಅಂದರೆ, 'ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಲಿದೆ ಎಂದು ಅವರು ಹೇಳಿದ್ದರು. ಇದಲ್ಲದೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಫಲರಾಗುತ್ತಾರೆ ಎಂತಲೂ ಬಾಬಾ ಹೇಳಿದ್ದರು.

ಆದರೆ ಬಾಬಾ ಹೇಳಿದ್ದ ಈ ಎರಡು ಭವಿಷ್ಯ ಇದೀಗ ಅಕ್ಷರಶಃ ಸುಳ್ಳಾಗಿದೆ. ಏಕೆಂದರೆ ಬಾಬಾ ಭವಿಷ್ಯಕ್ಕೆ ತದ್ವಿರುದ್ಧವಾಗಿ ಟೀಂ ಇಂಡಿಯಾ, ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಮಣಿಸಿತು. ಇನ್ನೊಂದು ಪಾಕ್ ವಿರುದ್ಧ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ಹೀಗಾಗಿ ಪಂದ್ಯಕ್ಕೂ ಮುನ್ನ ಭಾರತದ ವಿರುದ್ಧ ಪಂದ್ಯದ ಫಲಿತಾಂಶ ಬರಲಿದೆ ಎಂದು ಭವಿಷ್ಯ ನುಡಿದು ಟೀಂ ಇಂಡಿಯಾ ಅಭಿಮಾನಿಗಳ ಆತಂಕಕ್ಕೆ ಕಾರಣರಾಗಿದ್ದ ಈ ಐಐಟಿ ಬಾಬಾರನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 241 ರನ್ ಗಳಿಸಿತ್ತು. ಪಾಕಿಸ್ತಾನ ಪರ ಸೌದ್ ಶಕೀಲ್ ಅತಿ ಹೆಚ್ಚು ರನ್ ಗಳಿಸಿ 62 ರನ್‌ಗಳ ಇನ್ನಿಂಗ್ಸ್ ಆಡಿದರು. ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 42.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಕಿಂಗ್ ಕೊಹ್ಲಿ 111 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದರು.

ಕೊಹ್ಲಿಯನ್ನು ಹೊರತುಪಡಿಸಿ, ಶ್ರೇಯಸ್‌ ಅಯ್ಯರ್ ಕೂಡ 56 ರನ್‌ಗಳ ಕಾಣಿಕೆ ನೀಡಿದರು.

ಪಾಕ್ ವಿರುದ್ಧ ಗೆಲುವಿನ ಸೆಂಚುರಿ ಬಾರಿಸಿದ ವಿರಾಟ್ ಕೊಹ್ಲಿ:

ರನ್ ಬರ.. ಕಳಪೆ ಫಾರ್ಮ್.. ನಿವೃತ್ತಿ ಘೋಷಿಸಿಸಿ... ಕಳೆದ ಕೆಲವು ದಿನಗಳಿಂದ ಕೊಹ್ಲಿ ವಿಚಾರದಲ್ಲಿ ಹಲವು ಕ್ರಿಕೆಟ್ ಪಂಡಿತರು ಹೇಳುತ್ತಿದ್ದ ಮಾತಿದು. ಆದರೆ ಇಂದು ನಡೆದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಗೆಲುವಿನ ಶತಕ ಬಾರಿಸಿದ ವಿರಾಟ್ ಕೊಹ್ಲಿ, ಈ ಒಂದು ಶತಕದೊಂದಿಗೆ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಅಲ್ಲದೆ ಆರಂಭದಿಂದಲೂ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಜಯದ ದಡ ಮುಡಿಸಿದ್ದಾರೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಸುತ್ತಿಗೆ ಭಾಗಶಃ ಅರ್ಹತೆ ಪಡೆದರೆ, ಇತ್ತ ಪಾಕಿಸ್ತಾನ ತಂಡ ಲೀಗ್ ಹಂತದಲ್ಲೇ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳುವ ಆತಂಕದಲ್ಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗಲೂ ರೋಮಾಂಚಕಾರಿಯಾಗಿರುತ್ತದೆ.

ಹೀಗಾಗಿ ಈ ಪಂದ್ಯದಲ್ಲಿಯೂ ಕೂಡ ಭಾರತಕ್ಕೆ ಆರಂಭದಲ್ಲಿ ರನ್ ಗಳಿಸುವುದು ಸವಾಲಾಗಿತ್ತು.

ಏಕೆಂದರೆ ಆರಂಭದಲ್ಲಿಯೇ ರೋಹಿತ್‌ರನ್ನು ಔಟ್ ಮಾಡುವ ಮೂಲಕ ಪಾಕಿಸ್ತಾನ ಬೌಲರ್‌ಗಳು ಉತ್ತಮ ಹಿಡಿತ ಸಾಧಿಸಿದರು. ಅಂತಹ ಪರಿಸ್ಥಿತಿಯಲ್ಲಿ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ವಿರಾಟ್ ಕೊಹ್ಲಿ ಶತಕದ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 7 ಬೌಂಡರಿಗಳ ಸಹಿತ ಅಜೇಯ 100 ರನ್ ಕಲೆ ಹಾಕಿದರು.

16 ವರ್ಷಗಳ ಕಾಯುವಿಕೆ ಅಂತ್ಯ:

ವಿರಾಟ್ ಕೊಹ್ಲಿ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಆಡಿದ್ದು 2009 ರಲ್ಲಿ. ಆದರೆ ಈ ಟೂರ್ನಿಯಲ್ಲಿ ವಿರಾಟ್ ಶತಕ ಬಾರಿಸಿದ್ದು ಇದೇ ಮೊದಲು. ಅಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಕ ಬಾರಿಸಲು ಕೊಹ್ಲಿ 16 ವರ್ಷ ಕಾಯಬೇಕಾಯಿತು. ಅದೇ ಸಮಯದಲ್ಲಿ, 2023 ರ ಏಕದಿನ ವಿಶ್ವಕಪ್ ನಂತರ ಏಕದಿನದಲ್ಲಿ ಕೊಹ್ಲಿ ಶತಕ ಗಳಿಸಿದ್ದು ಇದೇ ಮೊದಲು. ಇದಲ್ಲದೆ, ಕೊಹ್ಲಿ 531 ದಿನಗಳ ನಂತರ ವಿದೇಶಿ ನೆಲದಲ್ಲಿ ಏಕದಿನ ಶತಕ ಬಾರಿಸಿದ ಸಾಧನೆಯನ್ನು ಮಾಡಿದ್ದಾರೆ.

ಕೊಹ್ಲಿ ಇನ್ನಿಂಗ್ಸ್‌ನ ವಿಶೇಷತೆ :
ಐಸಿಸಿ ಏಕದಿನ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ನಾಲ್ಕನೇ ಬಾರಿಗೆ 50+ ರನ್ ಗಳಿಸಿದ್ದಾರೆ, ಇದು ಒಂದು ದಾಖಲೆಯಾಗಿದೆ. ವಿರಾಟ್ ಹೊರತುಪಡಿಸಿ, ವಿವ್ ರಿಚರ್ಡ್ಸ್ ಮತ್ತು ಸಚಿನ್ ತೆಂಡೂಲ್ಕರ್ ಪಾಕಿಸ್ತಾನ ವಿರುದ್ಧ ತಲಾ 3 ಬಾರಿ 50+ ರನ್ ಗಳಿಸಿದ್ದರು. ಇದಲ್ಲದೆ, ಇದು ಐಸಿಸಿ ಏಕದಿನ ಪಂದ್ಯಾವಳಿಯಲ್ಲಿ ಅವರ 23 ನೇ 50+ ಸ್ಕೋರ್ ಆಗಿದೆ. ಅವರನ್ನು ಹೊರತುಪಡಿಸಿ, ಸಚಿನ್ ತೆಂಡೂಲ್ಕರ್ ಮಾತ್ರ ಐಸಿಸಿ ಏಕದಿನ ಪಂದ್ಯಗಳಲ್ಲಿ ಇಷ್ಟೊಂದು ಬಾರಿ 50+ ರನ್ ಗಳಿಸಲು ಸಾಧ್ಯವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ