Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

INDIA ಈಗ ರಿಪಬ್ಲಿಕ್ ಆಫ್ ಭಾರತ !

 

ದೆಹಲಿ :
ಇಂಡಿಯಾ ಎಂದಿರುವ ಹೆಸರನ್ನು ಭಾರತ ಎಂದು ನಾಮಕರಣ ಮಾಡಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಇದೀಗ ನರೇಂದ್ರ ಮೋದಿ ಸರಕಾರ ಕೆಲ ನಿರ್ಧಾರಗಳನ್ನು ತೆರೆಮರೆಯಲ್ಲಿ ತೆಗೆದುಕೊಳ್ಳುತ್ತಿದೆ.

 

ದೇಶವನ್ನು ಅಧಿಕೃತವಾಗಿ ಭಾರತ ಎಂದು ಹೆಸರಿಸುವ ಪ್ರಮುಖ ಮಸೂದೆಯನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಜಾರಿಗೆ ತರುವ ಸಾಧ್ಯತೆ ಇದೆ. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಜಿ-20 ಶೃಂಗ ಸಭೆಯ ಔತಣ ಕೂಟದ ಅಹ್ವಾನ ಪತ್ರಿಕೆಯಲ್ಲಿ ದಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲು ದಿ ಪ್ರೆಸಿಡೆಂಟ್ ಆಫ್ ಭಾರತ ಎಂದು ಬರೆಯಲಾಗಿದೆ.

ಪ್ರತಿ ಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ I.N.D.I.A ಎಂದು ಹೆಸರಿಟ್ಟಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಅವುಗಳಿಗೆ ಬಲವಾದ ಏಟು ನೀಡಲು ಈ ಸಂದರ್ಭದ ಸದಾವಕಾಶವನ್ನು ಸರಿಯಾಗಿ ಬಳಸಿಕೊಳ್ಳಲು ಮುಂದಾಗಲಿದೆ ಎಂಬ ಪ್ರಶ್ನೆ ಸಹ ಮೂಡಿದೆ.

ಈ ನಡುವೆ ಅಸ್ಸಾಂ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಿಪಬ್ಲಿಕ್ ಆಫ್ ಭಾರತ ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಅಭಿಪ್ರಾಯ ಪಟ್ಟಿದ್ದು ತಮ್ಮ ಟ್ವಿಟರ್ ನಲ್ಲಿ ರಿಪಬ್ಲಿಕ್ ಆಫ್ ಭಾರತ ಎಂದು ಬರೆದುಕೊಂಡಿದ್ದಾರೆ.

ನಿರ್ಧಾರ ಸಾಧ್ಯತೆ :
ಮುಂದಿನ ಸಂಸತ್‌ ವಿಶೇಷ ಅಧಿವೇಶನದ ವೇಳೆ ದೇಶದ ಹೆಸರನ್ನು ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಲಿದೆ ಎಂದು ವರದಿಯಾಗಿದೆ.

ರಿಪಬ್ಲಿಕ್ ಆಫ್‌ ಇಂಡಿಯಾ ಎನ್ನುವ ಹೆಸರಿನ ಬದಲು ರಿಪಬ್ಲಿಕ್‌ ಆಫ್‌ ಭಾರತ ಎನ್ನುವ ಹೆಸರನ್ನು ಇಡಲು ಸರ್ಕಾರ ತೀರ್ಮಾನ ಮಾಡಿದೆ. ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ಕಾರವು ಹೊಸ ನಿರ್ಣಯವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅದರೊಂದಿಗೆ ಮಂಗಳವಾರ ಬೆಳಗ್ಗೆ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ಜಿ20 ಶೃಂಗಸಭೆಯ ಹಿನ್ನಲೆಯಲ್ಲಿ ಸೆ. 9 ರಂದು ರಾತ್ರಿ ಭೋಜನಕೂಟಕ್ಕೆ ರಾಷ್ಟ್ರಪತಿ ಭವನದಿಂದ ಆಹ್ವಾನ ಬಂದಿದೆ. ಸಾಮಾನ್ಯವಾಗಿ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್‌ ಆಫ್‌ ಇಂಡಿಯಾ ಎಂದು ಉಲ್ಲೇಖವಿರುತ್ತಿತ್ತು. ಆದರೆ, ಈ ಬಾರಿಯ ಪತ್ರದಲ್ಲಿ ಪ್ರೆಸಿಡೆಂಟ್‌ ಆಫ್‌ ಭಾರತ್‌ ಎಂದು ಉಲ್ಲೇಖ ಮಾಡಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದೂ ಕೂಡ ಅಧಿಕೃತವಾಗಿ ಸರ್ಕಾರ ದೇಶದ ಹೆಸರನ್ನು ಇಂಡಿಯಾ ಎನ್ನುವುದರ ಬದಲು ಭಾರತ್‌ ಎಂದು ಮರುನಾಮಕರಣ ಮಾಡಲಿದೆ ಎನ್ನುವ ಸೂಚನೆ ನೀಡಿದೆ.

ದೇಶದ ಹೆಸರನ್ನು ಮರು ನಾಮಕರಣ ಮಾಡುವುದೇ ವಿಶೇಷ ಅಧಿವೇಶದ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ನಿರ್ಣಯವನ್ನು ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲಿಯೇ ಟ್ವೀಟ್‌ ಮಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮ, 'ಭಾರತ್ ಗಣರಾಜ್ಯ - ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಆಗುತ್ತಿದೆ' ಎಂದು ಬರೆದುಕೊಂಡಿದ್ದಾರೆ.

 

ನಮ್ಮ ಸಂವಿಧಾನವನ್ನು ಗೌರವಯುತವಾಗಿ, ಅವರು ಸಂವಿಧಾನದಲ್ಲಿ 'ಭಾರತ' ಮತ್ತು 'ಇಂಡಿಯಾ' ಪದಗಳನ್ನು ಇಟ್ಟುಕೊಂಡು ತಪ್ಪು ಮಾಡಿದ್ದಾರೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ಹೇಳಿದ್ದಾರೆ.

ಅಧಿಕೃತ ಜಿ 20 ಶೃಂಗಸಭೆಯ ಆಹ್ವಾನಗಳಲ್ಲಿ 'ಪ್ರೆಸಿಡೆಂಟ್‌ ಆಫ್‌ ಇಂಡಿಯಾ' ಎಂಬ ಉಲ್ಲೇಖವನ್ನು 'ಪ್ರೆಸಿಡೆಂಟ್‌ ಆಫ್‌ ಭಾರತ್‌' ಎಂದು ಬದಲಾಯಿಸಲು ಬಿಜೆಪಿಯ ತೀರ್ಮಾನ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಮತ್ತು ಸಾರ್ವಜನಿಕ ಚರ್ಚೆಯನ್ನು ಹುಟ್ಟುಹಾಕಿದೆ. ಬಿಜೆಪಿ ಹೇಗೆ 'ಇಂಡಿಯಾ'ವನ್ನು ಹೊಡೆದು ಹಾಕುತ್ತದೆ? ದೇಶವು ರಾಜಕೀಯ ಪಕ್ಷಕ್ಕೆ ಸೇರಿಲ್ಲ; ಇದು 135 ಕೋಟಿ ಭಾರತೀಯರಿಗೆ ಸೇರಿದ್ದು. ನಮ್ಮ ರಾಷ್ಟ್ರೀಯ ಅಸ್ಮಿತೆ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ, ಅದು ಮನಸೋಇಚ್ಛೆ ಮತ್ತು ಕಲ್ಪನೆಗಳ ಮೇಲೆ ಮಾರ್ಪಡಿಸುವಂತಿಲ್ಲ ಎಂದು ಆಪ್‌ ಸಂಸದ ರಾಘವ್‌ ಚಡ್ಡಾ ಟ್ವೀಟ್‌ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ