Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

POK ಬಗ್ಗೆ ಅತ್ಯಂತ ಸ್ಪಷ್ಟವಾಗಿ ಸಂದೇಶ ರವಾನಿಸಿದ ಭಾರತ

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)

ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಕ್ಕೆ ಭಾರತ ಸ್ಪಷ್ಟಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿರುದಾಗಿ ಮಾಧ್ಯಮಗಳಲ್ಲಿ ಭಾನುವಾರ ವರದಿಯಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಅವರು ಬಹು ಸಮಯದಿಂದಲೂ ಇರುವ ಕಾಶ್ಮೀರ ಸಮಸ್ಯೆ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ದ ಎಂದು ಹೇಳಿದ್ದರು. ಅದನ್ನು, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಸ್ವಾಗತಿಸಿದ್ದರು. ಇದೀಗ, ಈ ವಿಚಾರದಲ್ಲಿ ಭಾರತ ತನ್ನ ನಿಲುವು ಸ್ಪಷ್ಟಪಡಿಸಿದೆ.

ಶನಿವಾರ ಕದನ ವಿರಾಮ ಘೋಷಣೆಯಾದ ನಂತರ ಭಾರತ-ಪಾಕಿಸ್ತಾನ ಯುದ್ದದ ಆತಂಕ ದೂರವಾಗಿದೆ. ಆದಾಗ್ಯೂ, ಕದನ ವಿರಾಮ ಉಲ್ಲಂಘಿಸಿ ಪಾಕ್ ಪಡೆಗಳು ಗಡಿಯಲ್ಲಿ ದಾಳಿ ನಡೆಸಿರುವುದರಿಂದ ಅನಿಶ್ಚಿತ ಪರಿಸ್ಥಿತಿ ಇದೆ.

'ಕಾಶ್ಮೀರದ ವಿಚಾರದಲ್ಲಿ ಸ್ಪಷ್ಟ ನಿಲುವು ಹೊಂದಿದ್ದೇವೆ. ಪಿಒಕೆ ಹಿಂಪಡೆಯುವ ವಿಚಾರವಷ್ಟೇ ಬಾಕಿ ಇರುವುದು. ಅದನ್ನು ಬಿಟ್ಟರೆ ಮಾತನಾಡುವುಂತಹದ್ದೇನೂ ಇಲ್ಲ. ಉಗ್ರರ ಹಸ್ತಾಂತರದ ಬಗ್ಗೆ ಅವರು ಪ್ರಸ್ತಾಪಿಸಿದರೆ, ನಾವೂ ಮಾತನಾಡುತ್ತೇವೆ. ಆದರೆ, ಬೇರೆ ವಿಚಾರಗಳ ಬಗ್ಗೆ ಮಾತನಾಡುವ ಉದ್ದೇಶವಿಲ್ಲ' ಎಂದು ವಿದ್ಯಮಾನಗಳ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ.

ಹಾಗೆಯೇ, 'ನಾವು ಯಾರ ಮಧ್ಯಸ್ಥಿಕೆಯನ್ನೂ ಬಯಸುವುದಿಲ್ಲ. ಅದರ ಅಗತ್ಯವೂ ಇಲ್ಲ' ಎಂದು ಅಮೆರಿಕಕ್ಕೆ ಸ್ಪಷ್ಟವಾಗಿ ಹೇಳಿದೆ ಎನ್ನಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ