Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ 400 ವಿಕೆಟ್ ಸಾಧನೆ

ಚೆನ್ನೈ: ಭಾರತದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ 400 ಅಂತರರಾಷ್ಟ್ರೀಯ ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಈ ವೇಗದ ಬೌಲರ್ ಅಪರೂಪದ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಆ ಮೂಲಕ ಈ ಸಾಧನೆ ಮಾಡಿದ ಭಾರತದ ಆರನೇ ವೇಗದ ಬೌಲರ್ ಎನಿಸಿದ್ದಾರೆ. ಒಟ್ಟಾರೆಯಾಗಿ ಭಾರತದ ಪರ 400 ವಿಕೆಟ್ ಗಳಿಸಿದ 10ನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಬೂಮ್ರಾ ಮಿಂಚಿನ ದಾಳಿ ಸಂಘಟಿಸಿದರು.

400 ವಿಕೆಟ್‌ಗಳ ಪೈಕಿ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 162 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಏಕದಿನದಲ್ಲಿ 149 ಹಾಗೂ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 89 ವಿಕೆಟ್‌ಗಳನ್ನು ಪಡೆದಿದ್ದಾರೆ.

ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮುಂಚೂಣಿಯಲ್ಲಿದ್ದಾರೆ. ಕುಂಬ್ಳೆ ಒಟ್ಟು 953 ವಿಕೆಟ್‌ಗಳನ್ನು ಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ ಒಟ್ಟು 744 ವಿಕೆಟ್‌ ಪಡೆದಿದ್ದಾರೆ.

ಜಸ್‌ಪ್ರೀತ್ ಬೂಮ್ರಾ ಸೇರಿದಂತೆ ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿದ ಪ್ರವಾಸಿ ಬಾಂಗ್ಲಾದೇಶ ತಂಡವು, ಮೊದಲ ಇನಿಂಗ್ಸ್‌ನಲ್ಲಿ 47.1 ಓವರ್‌ಗಳಲ್ಲಿ ಕೇವಲ 149 ರನ್‌ಗಳಿಗೆ ಆಲೌಟ್ ಆಗಿದೆ.

ಇದರೊಂದಿಗೆ ರೋಹಿತ್ ಶರ್ಮಾ ಬಳಗವು ಮೊದಲ ಇನಿಂಗ್ಸ್‌ನಲ್ಲಿ 227 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ. ಎದುರಾಳಿ ಬಾಂಗ್ಲಾಕ್ಕೆ ಫಾಲೋ ಆನ್ ಹೇರುವ ಅವಕಾಶ ಇದ್ದರೂ ಎರಡನೇ ಇನಿಂಗ್ಸ್ ಬ್ಯಾಟಿಂಗ್ ನಡೆಸಲು ಟೀಮ್ ಇಂಡಿಯಾ ನಿರ್ಧರಿಸಿದೆ.

ಬುಮ್ರಾಗೆ ನಾಲ್ಕು ಮತ್ತು ಸಿರಾಜ್, ಆಕಾಶ್ ದೀಪ್ ಮತ್ತು ಜಡೇಜಾಗೆ ತಲಾ ಎರಡು ವಿಕೆಟ್ಗಳು ಬಾಂಗ್ಲಾದೇಶ 149 ರನ್ಗಳಿಗೆ ಆಲೌಟ್ ಆಗಿದೆ.

ಟೆಸ್ಟ್ ಪಂದ್ಯದಲ್ಲಿ ಶತಕದ ಸಾಧನೆ ಮಾಡಿರುವ ಭಾರತದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್, 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 30ಕ್ಕೂ ಹೆಚ್ಚು ಸಲ ಐದು ವಿಕೆಟ್ ಸಾಧನೆ (ಇನಿಂಗ್ಸ್‌ವೊಂದರಲ್ಲಿ) ಮತ್ತು 20ಕ್ಕೂ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ಗಳ ಸಾಧನೆ ಮಾಡಿದ (ಶತಕ ಸೇರಿದಂತೆ) ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಅಶ್ವಿನ್ ಭಾಜನರಾಗಿದ್ದಾರೆ.

ತವರು ಅಂಗಣ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಅಶ್ವಿನ್ ಈ ಸ್ಮರಣೀಯ ಸಾಧನೆ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅಶ್ವಿನ್ ಈಗಾಗಲೇ 36 ಸಲ ಐದು ವಿಕೆಟ್ ಸಾಧನೆ ಮಾಡಿದ್ದಾರೆ. ಹಾಗೆಯೇ ಆರು ಶತಕ ಹಾಗೂ 14 ಅರ್ಧಶಕಗಳನ್ನು ಗಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಎಂಟು ಹಾಗೂ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಡೇನಿಯಲ್ ವೆಟೊರಿ (5 ಶತಕ) ನಂತರದ ಸ್ಥಾನದಲಿ ಅಶಿ.ನ್ ಇದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ