Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟೆಸ್ಟ್ ಕ್ರಿಕೆಟ್‌ನಲ್ಲಿ ಸೊಗಸಾದ ದ್ವಿಶತಕದ ಸಾಧನೆ ಮಾಡಿದ ಭಾರತದ ನಾಯಕ

ಎಜ್‌ಬಾಸ್ಟನ್‌: ಭಾರತ ತಂಡದ ನಾಯಕ ಸೊಗಸಾದ ದ್ವಿಶತಕ ಬಾರಿಸುವ ಮೂಲಕ ಈಗ ಭಾರತದ ಬ್ಯಾಟಿಂಗ್ ಬಲವನ್ನು ಮತ್ತಷ್ಟು ಭದ್ರಪಡಿಸಿದ್ದಾರೆ. ಪ್ರಥಮ ಟೆಸ್ಟ್ ನಲ್ಲಿ ಸಹ ಅವರು ಸೊಗಸಾದ ಶತಕ ಬಾರಿಸಿದ್ದರು. ಇದೀಗ ಎರಡನೇ ಟೆಸ್ಟ್ ನಲ್ಲೂ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತನೆ ಮಾಡಿದ್ದಾರೆ. ಭಾರತದ ಟೆಸ್ಟ್ ಕ್ರಿಕೆಟ್ ನಾಯಕ ಶುಭಮನ್ ಗಿಲ್‌, ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ದ್ವಿಶತಕದ ಸಾಧನೆ ಮಾಡಿದ್ದಾರೆ.

ಎಜ್‌ಬಾಸ್ಟನ್‌ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಗಿಲ್ ಸ್ಮರಣೀಯ ಸಾಧನೆ ಮಾಡಿದ್ದಾರೆ.

ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾದ ಬಳಿಕ ಎರಡನೇ ಪಂದ್ಯದಲ್ಲೇ ಗಿಲ್ ದ್ವಿಶತಕ ಗಳಿಸಿದ್ದಾರೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಗಿಲ್ ಶತಕ ಗಳಿಸಿದ್ದರು.

ಆಂಗ್ಲರ ಬೌಲರ್‌ಗಳನ್ನು ಸಮರ್ಥವಾಗಿ ದಂಡಿಸಿದ 25 ವರ್ಷದ ಗಿಲ್‌, ಅಮೋಘ ಸಾಧನೆ ಮಾಡಿದ್ದಾರೆ. ಗಿಲ್ 311 ಎಸೆತಗಳಲ್ಲಿ ದ್ವಿಶತಕ ಗಳಿಸಿದ್ದಾರೆ. ಗಿಲ್ ಆಕರ್ಷಕ ಇನಿಂಗ್ಸ್‌ನಲ್ಲಿ 21 ಬೌಂಡರಿ ಹಾಗೂ 2 ಸಿಕ್ಸ‌ರ್ ಸೇರಿವೆ. ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ ದೇಶಗಳಲ್ಲಿ ಶತಕ ಗಳಿಸಿದ ಏಷ್ಯಾದ ನಾಯಕ ಎಂಬ ಖ್ಯಾತಿಗೂ ಗಿಲ್ ಭಾಜನರಾಗಿದ್ದಾರೆ. ದ್ವಿ ಶತಕದ ನಂತರ ಅವರ ಬ್ಯಾಟಿಂಗ್ ವೈಭವ ಮತ್ತಷ್ಟು ಬಿರುಸಾಗಿದ್ದು ಎಷ್ಟು ರನ್ ಗಳಿಸುತ್ತಾರೆ ಕಾದು ನೋಡಬೇಕಾಗಿದೆ.

ಭಾರತದ ನಾಯಕನಾಗಿ ಟೆಸ್ಟ್ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ

23y 39d - MAK ಪಟೌಡಿ ವಿರುದ್ಧ ENG, ದೆಹಲಿ, 1964

25y 298d - ಶುಭ್‌ಮನ್ ಗಿಲ್ vs ENG, ಎಡ್ಜ್‌ಬಾಸ್ಟನ್, 2025

26 ವರ್ಷ 189 ದಿನ - ಸಚಿನ್ ತೆಂಡೂಲ್ಕರ್ vs ನ್ಯೂಜಿಲೆಂಡ್, ಅಹಮದಾಬಾದ್, 1999

27 ವರ್ಷ 260 ದಿನಗಳು - ವಿರಾಟ್ ಕೊಹ್ಲಿ vs ವಿಂಡೀಸ್, ನಾರ್ತ್ ಸೌಂಡ್, 2016

ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ನಾಯಕರೊಬ್ಬರು 11 ದ್ವಿಶತಕಗಳನ್ನು ಬಾರಿಸಿದ್ದಾರೆ (ಆತಿಥೇಯರಿಗೆ ನಾಲ್ಕು, ಪ್ರವಾಸಿ ತಂಡಗಳಿಗೆ ಏಳು). 2003 ರಲ್ಲಿ ಎಡ್ಜ್‌ಬಾಸ್ಟನ್ ಮತ್ತು ಲಾರ್ಡ್ಸ್‌ನಲ್ಲಿ ನಡೆದ ಸತತ ಟೆಸ್ಟ್ ಪಂದ್ಯಗಳಲ್ಲಿ 277 ಮತ್ತು 259 ರನ್ ಗಳಿಸಿದ ಗ್ರೇಮ್ ಸ್ಮಿತ್ ಮಾತ್ರ ಗಿಲ್‌ಗಿಂತ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ಮೊದಲ ಬಾರಿಗೆ 22 ವರ್ಷ, 175 ದಿನಗಳು ವಯಸ್ಸಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ