Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತ ಆಂತರಿಕ ಸಮನ್ವಯತೆ ಮೂಲಕ ಸದೃಢತೆ ಸಾಧಿಸಲಿ- ಪ್ರೊ. ಎಂ.ಜಿ.ಹೆಗಡೆ

Advertisement
ಬೆಳಗಾವಿ : ಭಾರತದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹನೀಯರು ಸ್ವಾತಂತ್ರ್ಯ ಎಂಬ ಪದಕ್ಕಿಂತ ಸ್ವರಾಜ್ಯ ಎಂಬ ಪದವನ್ನು ಬಳಸಿದ್ದಾರೆ. ಅಂದು ಸ್ವರಾಜ್ಯ ಮತ್ತು ಸಮನ್ವಯತೆ ಇವು ಸ್ವಾತಂತ್ರ್ಯ ಹೋರಾಟದ ಮೂಲ ಮಂತ್ರವಾಗಿದ್ದವು. ಸ್ವಾತಂತ್ರ್ಯಾನಂತರ ನಾವು ವಿಜ್ಞಾನ ತಂತ್ರಜ್ಞಾನದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿ ಸಮೃದ್ಧ ಭಾರತವನ್ನು ಕಟ್ಟಿದ್ದೇವೆ. ಸ್ವಾತಂತ್ರ್ಯ ಸಂಗ್ರಾಮದ ಸಂದಭ೯ದಲ್ಲಿ ಆಂತರಿಕ ಬೇಧ ಮರೆತು ನಡೆಸಿದ ಹೋರಾಟದಿಂದ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಯಿತು.

ಇಂದು ಪ್ರತಿಯೊಬ್ಬರಲ್ಲೂ ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ಆಂತರಿಕ ಸಮನ್ವಯತೆಯ ಅರಿವು ಮೂಡಿಸಿದಾಗ ಮಾತ್ರ ಭಾರತವನ್ನು ಆಂತರಿಕವಾಗಿ ಮತ್ತು ಬಾಹ್ಯವಾಗಿ ಇನ್ನಷ್ಟು ಸಶಕ್ತವಾಗಿ ಸದೃಢ ರಾಷ್ಟ್ರವನ್ನು ಕಟ್ಟಬಹುದು ಎಂದು ಪ್ರೊ.ಎಂ.ಜಿ.ಹೆಗಡೆ ಹೇಳಿದರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಮುಖ್ಯ ಗ್ರಂಥಪಾಲಕರು ಪ್ರೊ. ವಿನಾಯಕ ಬಂಕಾಪುರ ಮಾತನಾಡಿ, ಸ್ವತಂತ್ರ ಭಾರತ ಇಂದು ವಿಜ್ಞಾನ ಮತ್ತು ತಂತ್ರಜ್ಞಾನ, ಚಂದ್ರಯಾನ, ಡಿಜಿಟಲ್ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲಿ, ಅಂತರಾಷ್ಟ್ರೀಯ ಸಂಬಂಧ ಸಾಧಿಸುವಲ್ಲಿ ಅಮೋಘ ಸಾಧನೆಗೈದು ಪ್ರಪಂಚದ ಹಲವು ಮುಂದುವರಿದ ರಾಷ್ಟ್ರಗಳನ್ನು ನಿಬ್ಬೆರಗೊಳಿಸಿದ್ದು ಹೆಮ್ಮೆಯ ಸಂಗತಿಯಾಗಿದೆ. ಅಂದು ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸು ಇಂದು ನನಸಾಗಿವೆ. ಅಂದಿನ ಸ್ವಾತಂತ್ರ್ಯ ಹೋರಾಟಗಾರ ತ್ಯಾಗ, ಬಲಿದಾನ ಮತ್ತು ಸ್ವತಂತ್ರ್ಯಾನಂತರ ನವ ಭಾರತ ನಿಮಾ೯ತೃಗಳ ಪರಿಶ್ರಮ ವ್ಯಥ೯ವಾಗದಂತೆ ದೇಶ ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ ಎಂದು ಕರೆ ನೀಡಿದರು.

೭೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಭಾಷಣ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮೊನಕಾ "ಪ್ರಚಲಿತ ಭಾರತದ ಸವಾಲುಗಳು ಹಾಗೂ ಭವಿಷ್ಯತ್ತಿನ ಕನಸುಗಳ" ಕುರಿತು ಮಾತನಾಡಿದರು. ಸ್ವಯಂ. ಟಿ ದೇಶಭಕ್ತಿಗೀತೆಯನ್ನು ಹಾಡಿದರು. ಸಮಾರಂಭದಲ್ಲಿ ಮಹಾವಿದ್ಯಾಲಯದ ಬೋಧಕ-ಬೋಧಕೇತರು ಉಪಸ್ಥಿತರಿದ್ದರು. ಸೌಮ್ಯಾ ತಾಳೂಕರ ಸ್ವಾಗತಿಸಿದರು. ಹಷಿ೯ತಾ ಮರಳಿ ನಿರೂಪಿಸಿದರು. ಲಕ್ಷ್ಮಿ ಹೊನಗೌಡರ ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ