Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KYC : ಗ್ಯಾಸ್ ಗ್ರಾಹಕರಿಗೆ ಮಾಹಿತಿ

 

ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ.

ಬೆಳಗ್ಗೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಜನರ ದಂಡೇ ನೆರೆದಿದೆ. ಎಲ್ಲರೂ ಆಧಾರ್ ಕಾರ್ಡ್‌ಗಳೊಂದಿಗೆ ಧಾವಿಸುತ್ತಾರೆ. ಕೆವೈಸಿ ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ನಿಲ್ಲಿಸಲಾಗುತ್ತದೆ. ಜೊತೆಗೆ ಈ ಸಂಪರ್ಕವನ್ನು ವಾಣಿಜ್ಯ ಸಂಪರ್ಕ ಎಂದು ಪರಿಗಣಿಸಲಾಗುತ್ತದೆ ಎಂಬ ಸುದ್ದಿ ಹರಡಿತ್ತು. ಕಳೆದ ವಾರವೂ ಇದೇ ರೀತಿಯ ಸುದ್ದಿ ಹರಡಿ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ನೆರೆದಿದ್ದರು.

ಈ ವಾರವೂ ಏಜೆನ್ಸಿಗಳ ಎದುರು ಜಮಾಯಿಸಿದ್ದಾರೆ. ಇದನ್ನು ನಿರೀಕ್ಷಿಸದೇ ಇದ್ದ ಕೆಲವು ಗ್ಯಾಸ್ ಏಜೆನ್ಸಿಗಳು ಕಂಗಾಲಾಗಿದ್ದವು. ಈ ಸಂಬಂಧ ಪೂರಕ ಸಿದ್ಧತೆ ಮಾಡಿಕೊಳ್ಳದೇ ಇದ್ದುದರಿಂದ ಪರದಾಡುವಂತಾಯಿತು.

ಈ ಸಂಬಂಧ ಮಾಹಿತಿ ನೀಡಿ, ಕೆವೈಸಿ ಮಾಡಿಸದಿದ್ದರೆ ಸಂಪರ್ಕ ರದ್ದಾಗುತ್ತದೆ ಎಂದಾಗಲಿ, ವಾಣಿಜ್ಯ ಸಂಪರ್ಕಕ್ಕೆ ಸಂಪರ್ಕ ಬದಲಾಗುತ್ತದೆ ಎಂಬುದೆಲ್ಲ ಸುಳ್ಳು ಸುದ್ದಿ. ಈ ರೀತಿಯ ಯಾವ ಆದೇಶವೂ ನಮಗೆ ಬಂದಿಲ್ಲ. ಆದರೆ ಕೆವೈಸಿ ಮಾಡಿಸುವುದು ಒಳ್ಳೆಯದು. ಇದರಿಂದ ಮುಂದಿನ ದಿನಗಳ ದಾಖಲಾತಿ ಸಂಗ್ರಹವಾದಂತಾಗುತ್ತದೆ. ಜೊತೆಗೆ ನಕಲಿ ಸಂಪರ್ಕಗಳು, ಇದ್ದರೆ ಅವೆಲ್ಲ ಸಹಜವಾಗಿಯೇ ರದ್ದಾಗುವಂತಾಗುತ್ತದೆ ಎಂದ ಅವರು, ಆಗಮಿಸಿದ್ದ ಎಲ್ಲರಿಗೂ ಕೆವೈಸಿ ಮಾಡಿಕೊಡಲಾಗುತ್ತಿದೆ.

ಕೊನೆಗೂ ಸ್ಪಷ್ಟನೆ :
ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಆಧಾರ್ ದೃಢೀಕರಣ ಕಡ್ಡಾಯ. ಉಳಿದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಂದ ಗ್ಯಾಸ್ ಬಳಕೆದಾರರು ಗೊಂದಲಕ್ಕೊಳಗಾಗಬಾರದು ಎಂದು ಆಹಾರ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ