Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಮುಂದೆ ಸಿಬಿಎಸ್‌ಇ 10 ನೇ ತರಗತಿಗೆ ವರ್ಷದಲ್ಲಿ 2 ಬಾರಿ ಪರೀಕ್ಷೆ

 

ನವದೆಹಲಿ: 10 ನೇ ತರಗತಿಯ ಪರೀಕ್ಷೆಗಳನ್ನು 2026 ರಿಂದ ವರ್ಷದಲ್ಲಿ ಎರಡು ಬಾರಿ ನಡೆಸುವ ಕರಡು ನಿಯಮಾವಳಿಗಳಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಮಂಗಳವಾರ ಅನುಮೋದನೆ ನೀಡಿದೆ.

ಕರಡು ನಿಯಮಾವಳಿ ಪ್ರಕಾರ, ಮೊದಲ ಹಂತದ ಪರೀಕ್ಷೆಗಳು ಫೆಬ್ರವರಿ 17 ರಿಂದ ಮಾರ್ಚ್ 6 ರವರೆಗೆ ಹಾಗೂ ಎರಡನೇ ಹಂತದ ಪರೀಕ್ಷೆಗಳು ಮೇ 5 ರಿಂದ 20 ರವರೆಗೆ ನಡೆಯಲಿವೆ.

ಎರಡು ಆವೃತ್ತಿಯ ಪರೀಕ್ಷೆಗಳನ್ನು ಪೂರ್ಣ ಪಠ್ಯಕ್ರಮದಲ್ಲಿ ನಡೆಸಲಾಗುವುದು. ಎರಡು ಆವೃತ್ತಿಗಳಲ್ಲೂ ಒಂದೇ ಪರೀಕ್ಷಾ ಕೇಂದ್ರ ಒದಗಿಸಲಾಗುವುದು. ಪರೀಕ್ಷಾ ಶುಲ್ಕ ಹೆಚ್ಚಿಸಲಾಗುತ್ತಿದ್ದು, ಅರ್ಜಿ ಸಲ್ಲಿಸುವಾಗಲೇ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಸಂಗ್ರಹಿಸಲಾಗುತ್ತದೆ. ಮೊದಲ ಮತ್ತು ಎರಡನೇ ಆವೃತ್ತಿಯ ಪರೀಕ್ಷೆಗಳನ್ನು ಹೊರತುಪಡಿಸಿ ಯಾವುದೇ ವಿಶೇಷ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಶಾಲಾ ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಬೇಕೆಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಶಿಫಾರಸು ಮಾಡಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ