Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಯಣ್ಣ ಪ್ರತಿಮೆಗೆ ಅವಮಾನ : ಬಿಗುವಿನ ಪರಿಸ್ಥಿತಿ ನಿರ್ಮಾಣ

ಬೆಳಗಾವಿ:ಕಿಡಿಗೇಡಿಗಳು ಬೆಳಗಾವಿಯಲ್ಲಿ ಕಿಡಿಹೊತ್ತಿಸಿದ್ದಾರೆ. ಶಾಂತವಾಗಿದ್ದ ಬೆಳಗಾವಿಯಲ್ಲಿ ಇದೀಗ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಅಪಮಾನ ಮಾಡಿದ್ದಾರೆ. ಇದರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ.

ಮಚ್ಚೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಅಪರಿಚಿತರು ಮಸಿ ಹಚ್ಚಿರುವ ಕುರಿತು ದೂರು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ಮೊದಲಿದ್ದ ರಾಯಣ್ಣ ಮೂರ್ತಿ ಕಪ್ಪು ಬಣ್ಣವೇ ಇತ್ತು. ಅದರ ಮೇಲೆ ಮತ್ತೆ ಕರಿಮಸಿ ಸುರಿದಿದ್ದಾರೆ. ಕೆಲವು ಕಾಲ ಇದನ್ನು ಯಾರು ಗಮನಿಸಿರಲಿಲ್ಲ. ಆದರೆ ರಾತ್ರಿ ಇದು ಕೆಲ ಯುವಕರ ಗಮನಕ್ಕೆ ಬಂದಿದೆ. ತಕ್ಷಣ ಯುವಕರು ಸ್ಥಳದಲ್ಲಿ ಸೇರಿ ಘೋಷಣೆ ಕೂಗಿದರು.

ದೂರು ಸ್ವೀಕರಿಸಿದ ತಕ್ಷಣವೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತಿಮೆಯ ಮೇಲಿದ್ದ ಮಸಿಯ ಮಾದರಿಯನ್ನು ಸಂಗ್ರಹಿಸಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳದ ಸಮೀಪದಲ್ಲೇ ಸುಮಾರು 10 ಮೀಟರ್ ದೂರದಲ್ಲಿ ಸಿಸಿಟಿವಿ ಕ್ಯಾಮೆರಾ ಇರುವುದರಿಂದ ಅದರ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ದೂರುದಾರರನ್ನು ವಿಚಾರಣೆಗೊಳಪಡಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ