Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು. ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.
2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.
ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ [email protected] ಗೆ ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ