Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾರ್ಮುಜ್ ಜಲ ಮಾರ್ಗ ತೆರೆಯಲು ಒಪ್ಪಿದ ಇರಾನ್‌ ; ಎರಡು ವಾರ ಕಾಲ ಕದನ ವಿರಾಮಕ್ಕೆ ಸಮ್ಮತಿಸಿದ ಅಮೆರಿಕ

ವಾಷಿಂಗ್ಟನ್/ತೆಹ್ರಾನ್ : ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮಕ್ಕೆ ಸಮ್ಮತಿಸಿದ್ದಾರೆ. ಈ ಮೂಲಕ ಇರಾನ್‌ನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳ ಮೇಲಿನ ದಾಳಿಯನ್ನು ಅಮೆರಿಕ ಸದ್ಯಕ್ಕೆ ಸ್ಥಗಿತಗೊಳಿಸಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ನೀಡಿದ ಪ್ರಸ್ತಾವನೆಯನ್ನು ಟ್ರಂಪ್ ಒಪ್ಪಿಕೊಂಡಿದ್ದಾರೆ. ಈ ಪ್ರಸ್ತಾವನೆಯು 15 ದಿನಗಳ ಕಾಲ ಯುದ್ಧ ನಿಲುಗಡೆ ಮತ್ತು ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ತಕ್ಷಣವೇ ತೆರೆಯಲು ಸೂಚಿಸುತ್ತದೆ.

ಇರಾನ್‌ನ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಈ ಕದನ ವಿರಾಮವನ್ನು ಸ್ವಾಗತಿಸಿದ್ದಾರೆ. “ಅಮೆರಿಕ ದಾಳಿಯನ್ನು ನಿಲ್ಲಿಸಿದರೆ, ನಮ್ಮ ಸಶಸ್ತ್ರ ಪಡೆಗಳು ಕೂಡ ರಕ್ಷಣಾತ್ಮಕ ಕಾರ್ಯಾಚರಣೆ ಸ್ಥಗಿತಗೊಳಿಸಲಿವೆ” ಎಂದು ಅವರು ತಿಳಿಸಿದ್ದಾರೆ.

ಇರಾನ್‌ನ ನೂತನ ಸುಪ್ರೀಂ ಲೀಡರ್ ಆಯತೊಲ್ಲಾ ಮೊಜ್ತಾಬಾ ಖಮೇನಿ ಅವರು ಈ ಒಪ್ಪಂದಕ್ಕೆ ಅಸ್ತು ಎಂದಿದ್ದಾರೆ. ಈ ನಿರ್ಧಾರದ ಹಿಂದೆ ಇರಾನ್‌ನ ಮಿತ್ರ ರಾಷ್ಟ್ರವಾದ ಚೀನಾದ ಒತ್ತಡ ಪ್ರಮುಖ ಪಾತ್ರ ವಹಿಸಿದೆ ಎಂದು ವರದಿಗಳು ತಿಳಿಸಿವೆ.

ಹಾರ್ಮುಜ್ ಜಲಸಂಧಿಯ ಮೂಲಕ ಸಂಪೂರ್ಣ ಮತ್ತು ಸುರಕ್ಷಿತ ಸಂಚಾರಕ್ಕೆ ಇರಾನ್ ಅವಕಾಶ ನೀಡಬೇಕು ಎಂಬ ಷರತ್ತಿನ ಮೇಲೆ ಈ ಕದನ ವಿರಾಮ ಜಾರಿಗೆ ಬಂದಿದೆ.

ಫೆಬ್ರವರಿ 28 ರಂದು ಆರಂಭವಾದ ಈ ಯುದ್ಧದಲ್ಲಿ ಇದುವರೆಗೆ ಭಾರಿ ಸಾವುನೋವು ಸಂಭವಿಸಿದೆ. ಇರಾನಿನಲ್ಲಿ 1,900ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ. ಲೆಬನಾನಿನಲ್ಲಿ 1,500ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಅಮೆರಿಕದ 13 ಸೈನಿಕರು ಮತ್ತು ಇಸ್ರೇಲ್‌ನ 11 ಸೈನಿಕರು ಯುದ್ಧದಲ್ಲಿ ಮೃತಪಟ್ಟಿದ್ದಾರೆ.
ಈ ಎರಡು ವಾರಗಳ ಅವಧಿಯಲ್ಲಿ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ಅಂತಿಮ ಒಪ್ಪಂದದ ಬಗ್ಗೆ ಚರ್ಚಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ