Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹಾಪೌರರ ಮತ್ತು ಉಪ ಮಹಾಪೌರರ ಹುದ್ದೆಗಳನ್ನು ಅಲಂಕರಿಸಿದವರು ಒಬ್ಬರು ನೇಕಾರರು, ಮತ್ತೊಬ್ಬರು ಲಿಂಗಾಯತ ಸಮಾಜದವರು. ಇವೆರಡೂ ಸಮಾಜಗಳು ಬೆಳಗಾವಿಯ ಗಡಿ ಹೋರಾಟದ ಇತಿಹಾಸದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಲೇ ಬಂದಿವೆ. ಈಗ ಈ ಸಮಾಜಕ್ಕೆ ಸೇರಿದ ಇಬ್ಬರೂ ಸೇರಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಹೇಳಿದ್ದಾರೆ.

ವಡಗಾವಿಯಲ್ಲಿ ಗಡಿನಾಡು ಕನ್ನಡಿಗರ ಸೇನೆಯ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಳೆದ ಐದು ದಶಕಗಳಲ್ಲಿ ನಡೆದ ಕನ್ನಡ ಚಳವಳಿಗಳಲ್ಲಿ ಭಾಗವಹಿಸಿದವರಲ್ಲಿ ಈ ಭಾಗದ ಕನ್ನಡ ಅಭಿಮಾನಿಗಳೇ ಅಧಿಕ ಸಂಖ್ಯೆಯಲ್ಲಿರುತ್ತಿದ್ದರು.1988 ರಲ್ಲಿ ಬೆಂಗಳೂರಿಗೆ ಹೋಗಿದ್ದ 1200 ಜನರ ರೈಲು ಜಾಥಾದಲ್ಲಿ ಪ್ರತಿಶತ 90 ರಷ್ಟು ಜನರು ಈ ಭಾಗದವರೇ ಆಗಿದ್ದರು ಎಂದು ಸ್ಮರಿಸಿಕೊಂಡರು.

ಬೆಳಗಾವಿಯ ಸಮಾನ ಮನಸ್ಕ 22 ಕನ್ನಡ ಸಂಘಟನೆಗಳು ಕಳೆದ ಮಾರ್ಚ್ 26 ರಿಂದ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಗೆ ಆಗ್ರಹಿಸಿ ಹೋರಾಟ ನಡೆಸಿವೆ. ಅಂಗೀಕಾರವಾಗುವವರೆಗೆ ಹೋರಾಟ ನಡೆದೇ ನಡೆಯುತ್ತದೆ. ಅಪ್ಪಟ ಕನ್ನಡಿಗರಾದ ಮಹಾಪೌರರು ಮತ್ತು ಉಪ ಮಹಾಪೌರರು ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕು. ಈ ಪ್ರದೇಶದ ಜನರಿಗೆ ಕನ್ನಡಾಭಿಮಾನ ರಕ್ತಗತವಾಗಿ ಬಂದಿದೆ. ಇಲ್ಲಿಯ ಜನರಿಗೆ ಕನ್ನಡಾಭಿಮಾನವನ್ನು ಹೇಳಿಕೊಡುವ ದುಸ್ಸಾಹಸಕ್ಕೆ ತಾವು ಕೈ ಹಾಕುವುದಿಲ್ಲ ಎಂದು ಅಶೋಕ ಚಂದರಗಿ ಹೇಳಿದರು. 

ಕನ್ನಡಾಭಿಮಾನವನ್ನು ಹೇಳಿಕೊಡುವ ದುಸ್ಸಾಹಸಕ್ಕೆ ತಾವು ಕೈ ಹಾಕುವುದಿಲ್ಲ ಎಂದು ಅಶೋಕ ಚಂದರಗಿ ಹೇಳಿದರು. 

ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಅವರು ಮಾತನಾಡಿ, ದೀರ್ಘ ಕಾಲದ ನಂತರ ಈ ಭಾಗದಲ್ಲಿ ಕನ್ನಡ ಸಂಘಟನೆಯೊಂದರ ಘಟಕ ಸ್ಥಾಪನೆ ಆಗುತ್ತಿರುವುದು ಸಂತಸದ ಸಂಗತಿಯಾಗಿದೆ. ನೇಕಾರಿಕೆ ಉದ್ಯೋಗದಲ್ಲಿಯ ಸಂಕಷ್ಟದಿಂದಾಗಿ ಹೋರಾಟದ ತೀವ್ರತೆ ಕೊಂಚ ಕಡಿಮೆಯಾಗಿದೆ. ಆದರೆ ಕನ್ನಡ ಅಭಿಮಾನಕ್ಕೆ ಕೊರತೆಯಾಗಿಲ್ಲ ಎಂದರು.

ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ  ಮಾತನಾಡಿ, ತಮ್ಮ ಸಂಘಟನೆಯ ಘಟಕಗಳನ್ನು ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಗ್ರಾಮೀಣ ವಿಧಾನಸಭೆ ಮತಕ್ಷೇತ್ರಗಳಲ್ಲಿ ಮುಂದಿನ ದಿನಗಳಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಕಟಿಸಿದರು.

ಸೇನೆಯ ರಾಜ್ಯ ಉಪಾಧ್ಯಕ್ಷೆ ವಂದನಾ ಹೊರಕೇರಿ, ಆನಂದ ಬಿಲಾವರ, ಸಂತೋಷ ಮಾಸೇನಟ್ಟಿ, ಮಂಜುನಾಥ ಪಾಸ್ತಿ, ರಂಜನ್ ಹಳಬರ,ರಾಹುಲ್ ಭೋಸ್ಲೆ, ಸಿದ್ದರಾಯ ಮಾಸೇನಟ್ಟಿ, ಸಾಗರ್ ಕೋಲ್ಕರ್ ಮುಂತಾದ ಸೇನೆಯ ಪದಾಧಿಕಾರಿಗಳು  ಉಪಸ್ಥಿತರಿದ್ದರು. ಎಸ್.ಎಸ್. ಮೂಕನವರ ಸ್ವಾಗತಿಸಿ ವಂದಿಸಿದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ