Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶೇಷಚೇತನ ಮಗು ದತ್ತು ಪಡೆದ ಇಟಲಿ ದಂಪತಿ

 

ಬೆಳಗಾವಿ: ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿನ ವಿಶೇಷಚೇತನ ಮಗುವನ್ನು ಇಟಲಿ ದೇಶದ ದಂಪತಿ ಸೋಮವಾರ ದತ್ತು ಪಡೆದರು.

ಇಟಲಿಯ ಪ್ಲಾರೆನ್ಸ್ ನಗರದ ನಿವಾಸಿಗಳಾದ ಕೋಸ್ತಾಂಜಾ ಹಾಗೂ ಬುಜಾರ್ ಡೆಡೆ ದಂಪತಿ ದತ್ತು ಪಡೆದವರು. ಈ ದಂಪತಿಗೆ ಮಕ್ಕಳಿಲ್ಲ. ಕೋಸ್ತಾಂಜಾ ಅವರು ಇಟಲಿ ಸರ್ಕಾರಿ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ವೈದ್ಯರಾಗಿದ್ದರೆ, ಬುಜಾರ್ ಡೆಡೆ ಅಪಘಾತದಲ್ಲಿ ಅಂಗವಿಕಲರಾಗಿದ್ದಾರೆ. ಅವರಂತೆ ಅಪಘಾತದಲ್ಲಿ ಕಾಲು ಕಳೆದುಕೊಂಡವರಿಗೆ ತರಬೇತಿ ನೀಡುತ್ತಾರೆ.

ದತ್ತು ಪಡೆದ ಎರಡೂವರೆ ವರ್ಷದ ಮಗುವಿಗೆ ಆನಂದ ಎಂದು ಹೆಸರಿಡಲಾಗಿದೆ. ಈ ಮಗು ಅವಧಿಪೂರ್ವ ಜನಿಸಿತ್ತು. ಆಗ 1.3 ಕೆಜಿ ತೂಕ ಮಾತ್ರ ಇತ್ತು. ದೃಷ್ಟಿದೋಷವೂ ಸೇರಿ ಆರೋಗ್ಯದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೆತ್ತವರು ಬಿಟ್ಟುಹೋದ ಹಸುಳೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ರಕ್ಷಣೆ ಮಾಡಿದ್ದರು. ಎರಡೂವರೆ ವರ್ಷಗಳಿಂದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಪೋಷಣೆ ಮಾಡಲಾಗಿದೆ.

ಪೋಷಕರು ಕೂಲಂಕಶ ವಿಚಾರ ಮಾಡಿ, ಆರೋಗ್ಯವಂತ ಮಗುವನ್ನು ಮಾತ್ರ ಪಡೆಯುತ್ತಾರೆ. ತಮ್ಮ ಭವಿಷ್ಯಕ್ಕೆ ಮಗು ಆಸರೆಯಾಗುತ್ತದೆ ಎಂದು ಯೋಚಿಸುತ್ತಾರೆ. ಆದರೆ, ಕೋಸ್ತಾಂಜಾ ಹಾಗೂ ಬುಜಾರ್ ಡೆಡೆ ದಂಪತಿ ವಿಶೇಷಚೇತನ ಮಗುವಿಗೆ ಹೊಸಬಾಳು ನೀಡಲು ಬಂದಿದ್ದಾರೆ. ತಮಗೆ ಮಕ್ಕಳಾಗಲಿಲ್ಲ ಎಂದು ಕೊರಗದೇ, ವಿಶೇಷ ಚೇತನ ಮಗುವೊಂದನ್ನು ಪೋಷಣೆ ಮಾಡಲು ಮುಂದಾಗಿದ್ದು ಪ್ರಶಂಸನೀಯ ಎಂದು ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷೆ ಡಾ.ಮನಿಷಾ ಭಾಂಡನಕರ್ ತಿಳಿಸಿದರು.

ಈ ದಂಪತಿ ಆರು ವರ್ಷಗಳ ಹಿಂದೆ ದತ್ತು ಪಡೆಯಲು ಅರ್ಜಿ ಸಲ್ಲಿಸಿದ್ದರು. 'ಕಾರಾ' ನಿಯಮ (ಸೆಂಟ್ರಲ್ ಅಡಾಪ್ಟನ್ ರಿಸೋರ್ಸ್ ಅಥಾರಿಟಿ)ದಂತೆ ಎಲ್ಲವನ್ನೂ ಪರಿಶೀಲಿಸಿ, ಸಂದರ್ಶನ ಮಾಡಿ ಮಗು ದತ್ತು ನೀಡಲಾಗಿದೆ. ಮಂಗಳವಾರ (ಫೆ.18) ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮಗುವನ್ನು ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದರು.

ಈ ಕೇಂದ್ರದಿಂದ ಈವರೆಗೆ 120 ಮಕ್ಕಳನ್ನು ದತ್ತು ನೀಡಲಾಗಿದೆ. ಅದರಲ್ಲಿ 13 ಮಕ್ಕಳನ್ನು ವಿದೇಶಿ ಪೋಷಕರು ಪಡೆದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ