Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಾಪುರದಿಂದ ಧಾರವಾಡ ರೈಲ್ವೆ ಮಾರ್ಗ ಪ್ರಯತ್ನ: ಸಂಸದ ಜಗದೀಶ ಶೆಟ್ಟರ

ಬೆಳಗಾವಿ : ಕ್ಷೇತ್ರದ ಅಭಿವೃದ್ಧಿ ಜೊತೆಗೆ ಲೋಕಾಪುರದಿಂದ ಧಾರವಾಡಕ್ಕೆ ಸೇರುವ ನಿಯೋಜಿತ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ರಾಮದುರ್ಗದ ರೈಲ್ವೆ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದ ಅವರು, ಸವದತ್ತಿಯ ಯಲ್ಲಮ್ಮ ದೇವಸ್ಥಾನದ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಹೇಳಿದರು.

ಈ ಭಾಗದ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳ ವೀಕ್ಷಣೆಗೆ ಕೋಟಿಗೂ ಹೆಚ್ಚು ಜನ ಆಗಮಿಸುತ್ತಿದ್ದಾರೆ. ಇದನ್ನು ಅರಿತ ಕೇಂದ್ರ ರೈಲ್ವೆ ಸಚಿವರು ನೂತನ ರೈಲ್ವೆ ಮಾರ್ಗದ ಮರು ಸಮೀಕ್ಷೆ ಒಪ್ಪಿಗೆ ಸೂಚಿಸಿದ್ದಾರೆ. ಇದರಿಂದ ಲೋಕಾಪುರ, ರಾಮದುರ್ಗ, ಸವದತ್ತಿ ಮತ್ತು ಧಾರವಾಡಕ್ಕೆ ಹೋಗುವ ರೈಲ್ವೆ ಮಾರ್ಗ ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ವಿಶೇಷ ಕಾಳಜಿ ವಹಿಸುವುದಾಗಿ ಅವರು ತಿಳಿಸಿದರು.

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ಸದಸ್ಯರಾದ ಗೈಬು ಜೈನೆಖಾನ, ಮಹ್ಮದ್‌ಶಫಿ ಬೆಣ್ಣಿ, ಎಂ.ಕೆ. ಯಾದವಾಡ, ದಾದಾಪೀರ ಹಾಜಿ ಸೇರಿದಂತೆ ಅನೇಕರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ