Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೇಡಿಕೆಯಿರುವ ನಗರಗಳಿಗೆ ವಿಮಾನ ಸೇವೆ : ಜಗದೀಶ ಶೆಟ್ಟರ್

ಬೆಳಗಾವಿ : ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ಅವರು ಬೆಳಗಾವಿ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಬೆಳಗಾವಿ ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತು ಕಂದಾಯ ಇಲಾಖೆ, ಭಾರತೀಯ ವಾಯು ಸೇನಾ ಇಲಾಖೆ, ವಿಮಾನ ನಿಲ್ದಾಣ ಪ್ರಾಧಿಕಾರ, ಇಂಡಿಗೋ ಮತ್ತು ಸ್ಟಾರ್ ಏರ್ಲೈನ್ಸ್ ಅಧಿಕಾರಿಗಳೊಡನೆ ಸಭೆಯನ್ನು ಬೆಳಗಾವಿ ವಿಮಾನ ನಿಲ್ದಾಣ ಕಚೇರಿಯಲ್ಲಿ ನಡೆಸಿದರು.

ಬೆಳಗಾವಿ ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ, ದೇಶದ ವಿವಿಧ ನಗರಗಳಿಗೆ ವಿಮಾನಯಾನ ಸೇವೆ ಒದಗಿಸುವುದು ಸಾರ್ವಜನಿಕರ ಅನೇಕ ದಿನಗಳ ಬೇಡಿಕೆ, ಈ ವಿಷಯವಾಗಿ ಸಭೆಯಲ್ಲಿ ಹಾಜರಿದ್ದ ಇಂಡಿಗೋ ಮತ್ತು ಸ್ಟಾರ್ ಏರ್ಲೈನ್ಸ್ ಸಂಸ್ಥೆಯ ಅಧಿಕಾರಗಳನ್ನು ಯಾವ ನಗರಗಳಿಗೆ ತಮ್ಮ ಸಂಸ್ಥೆಯು ವಿಮಾನ ಸೇವೆಯನ್ನು ಒದಗಿಸಬಹುದಾಗಿದೆ ಎಂಬ ವಿಷಯವಾಗಿ ವಿಚಾರಿಸಲಾಗಿ, ಅವರು ಬರುವ ದಿನಗಳಲ್ಲಿ ಪುಣೆ ನಗರಕ್ಕೆ ಪ್ರಪ್ರಥಮವಾಗಿ ವಿಮಾನಯಾನ ಸೇವೆ ಒದಗಿಸಲಾಗುವ ಬಗ್ಗೆ ಆಶ್ವಾಸನೆಯನ್ನು ಸ್ಟಾರ್ ಏರ್ಲೈನ್ಸ್ ಹಾಗೂ ಇಂಡಿಗೋ ಅಧಿಕಾರಿಗಳು ನೀಡಿದರು.

ಅದರಂತೆ ಮುಂಬರುವ ದಿನಗಳಲ್ಲಿ ಬಹು ಬೇಡಿಕೆ ಇರುವ ನಗರಗಳಾದ ಜೋದ್ಪುರ, ಅಜ್ಮೀರ್ , ಚೆನ್ನೈ ಮಾರ್ಗದಲ್ಲೂ ಸಹ ವಿಮಾನಯಾನ ಸೇವೆಯನ್ನು ಅವರ ಸಂಸ್ಥೆಯು ನೀಡುವ ಬಗ್ಗೆ ಏರ್ಲೈನ್ಸ್ ಅಧಿಕಾರಿಗಳು ಭರವಸೆಯನ್ನು ಈ ಸಂದರ್ಭದಲ್ಲಿ ಸಂಸದರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಪರಿವರ್ತಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಗಿ ಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿಯೂ ಸಹ ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಅಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ವಾಹನ ದಟ್ಟಣೆಯನ್ನು ತಡೆಯುವುದಕ್ಕೆ ಬೆಳಗಾವಿ - ಸಾಂಬ್ರಾ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಶೀಘ್ರ ಪರಿವರ್ತಿಸುವ ಬಗ್ಗೆ ಸಭೆಗೆ ತಿಳಿಸಲಾಯಿತು.

ವಿಮಾನ ನಿಲ್ದಾಣ ಅಭಿವೃದ್ಧಿಯ ಇನ್ನೊಂದು ಅಂಗವಾಗಿ ನಿರ್ಮಾಣಗೊಳ್ಳುತ್ತಿರುವ ಟರ್ಮಿನಲಗಳ ಕಟ್ಟಡದ ವೀಕ್ಷಣೆಯನ್ನು ಸಂಸದರು ಕೈಕೊಂಡು, ಕಾಮಗಾರಿ ಪ್ರಗತಿಯ ಬಗ್ಗೆ ತಮ್ಮ ಸಂತಸ ಹಂಚಿಕೊಂಡು, ಬರುವ ಸನ್: 2026 ರಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲ್ಲಿರುವ ಬಗ್ಗೆ ನಂತರ ಪ್ರಯಾಣಿಕರಿಗೆ ದೇಶದ ವಿವಿಧ ನಗರಗಳಿಗೆ ಇನ್ನು ಹೆಚ್ಚಿನ ವಿಮಾನ ಸೇವೆಯ ಅನುಕೂಲತೆ ಅವಶ್ಯ ದೊರೆಯಲಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ಸಹಾಯಕ ಆಯುಕ್ತ ಶ್ರವಣ, ವಿಮಾನಯಾನ ಪ್ರಾಧಿಕಾರದ ನಿರ್ದೇಶಕ ತ್ಯಾಗರಾಜನ್ ಹಾಗೂ ಇಂಡಿಗೋ ಮತ್ತು ಸ್ಟಾರ್ ಏರ್ಲೈನ್ಸ್ ಅಧಿಕಾರಿಗಳು ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ