Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಜಗದೀಶ ಶೆಟ್ಟರ್

ಬೆಳಗಾವಿ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂಸದ ಜಗದೀಶ ಶೆಟ್ಟರ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅಹ್ವಾನಿಸಿದ್ದಾರೆ.

ಬೆಳಗಾವಿ ಬಾರ್ ಅಸೋಸಿಯೇಷನ್ , ಬೆಳಗಾವಿ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ( ನೂರ ಐವತ್ತು ವರ್ಷ) ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಅಧ್ಯಕ್ಷರು ಬೆಳಗಾವಿ ಬಾರ್ ಅಸೋಸಿಯೇಷನ್ ಇವರ ಮನವಿಯಂತೆ "ಮುಖ್ಯ ಅತಿಥಿ" ಗಳಾಗಿ ಆಗಮಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿಯವರನ್ನು ಜಗದೀಶ ಶೆಟ್ಟರ ಅವರು ನವ ದೆಹಲಿಯ ಸಂಸದ ಭವನದ ಕಚೇರಿಯಲ್ಲಿ ಇಂದು ಭೇಟಿ ಮಾಡಿ, ವಿನಂತಿಸಿದರು.

150 ( ನೂರ ಐವತ್ತು ವರ್ಷ) ನೇ ವಾರ್ಷಿಕೋತ್ಸವ ಸಮಾರಂಭವು ತಾತ್ಕಾಲಿಕವಾಗಿ ದಿನಾಂಕ: 4ನೇ ಅಕ್ಟೋಬರ 2025 ರಂದು ಆಯೋಜಿತಗೊಂಡಿರುತ್ತದೆ. ರಾಜ್ಯಾದ್ಯಂತ ಸುಮಾರು 20 ಸಾವಿರಕ್ಕೂ ಅಧೀಕ ಸಂಖ್ಯೆಯಲ್ಲಿ ವಕೀಲರ ಸಮೂಹ ಭಾಗವಹಿಸಲಿದ್ದು, ಅದರಂತೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಸಹ ಇದರಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಬಗ್ಗೆ ಒಪ್ಪಿಗೆ ಸೂಚಿಸುವಂತೆ ವಿನಂತಿಸಿದರು.

ಮನವಿಯನ್ನು ಅವಲೋಕಿಸಿದ ಪ್ರಧಾನ ಮಂತ್ರಿಗಳು, ಈ ಪ್ರಸ್ತಾಪಿತ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಇದರಲ್ಲಿ ಭಾಗವಹಿಸುವ ಬಗ್ಗೆ ತಮ್ಮ ಭರವಸೆಯನ್ನು ನೀಡಿದರು ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಬೆಳಗಾವಿ - ಬೆಂಗಳೂರು - ಬೆಳಗಾವಿ ನಡುವೆ "ವಂದೇ ಭಾರತ" ಎಕ್ಸಪ್ರೆಸ್ ರೈಲು ಸಂಚಾರಕ್ಕೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಅದರಂತೆ ರೈಲು ಶೀಘ್ರ ಪ್ರಸ್ತಾಪಿತ ಮಾರ್ಗದಲ್ಲಿ ಸಂಚರಿಸುವ ಬಗ್ಗೆ ಹಸಿರು ನಿಶಾನೆ ತೋರಿಸಲು ಪ್ರಧಾನ ಮಂತ್ರಿಗಳಲ್ಲಿ ಇದೇ ಸಂದರ್ಭದಲ್ಲಿ ವಿನಂತಿಸಲಾಯಿತು. ಈ ಬಗ್ಗೆ ಅಗತ್ಯ ಸೂಚನೆಯನ್ನು ಕೇಂದ್ರ ರೇಲ್ವೆ ಸಚಿವರಿಗೆ ನೀಡುವುದಾಗಿ ಸಹ ಅವರು ತಿಳಿಸಿರುವುದಾಗಿ ಜಗದೀಶ ಶೆಟ್ಟರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ