Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಬಾರ್ಡ್ ನಿಂದ ಕೋಲ್ಡ್ ಸ್ಟೋರೇಜ್ ಘಟಕ ಸ್ಥಾಪನೆಗೆ ಅನುಮತಿ : ಜಗದೀಶ ಶೆಟ್ಟರ

ಬೆಳಗಾವಿ : ನಬಾರ್ಡ್ ಗ್ರಾಮೀಣ ಮೂಲಭೂತ ಅಭಿವೃದ್ಧಿ ಅನುದಾನ 2024 - 25 ( RIDF 2024-25 ) ಯೋಜನೆಯಡಿ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ರೂ. 9.025 ಕೋಟಿ ಮೌಲ್ಯದ 2240 ಎಮ್.ಟಿ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ಘಟಕ ಸ್ಥಾಪನೆಗೆ ನಬಾರ್ಡ್ ಅನುಮತಿ ದೊರೆತಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದ್ದಾರೆ.

ರೈತರು ಬೆಳೆದ ಉತ್ಪನ್ನದ ಸುಮಾರು ಶೇಕಡಾ 25-30 ರಷ್ಟು ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳು ಯಾವತ್ತೂ ಕೋಲ್ಡ್ ಸ್ಟೋರೇಜ್ ಸೌಲಭ್ಯವಿಲ್ಲದ ಕಾರಣ ಅನಾವಶ್ಯಕವಾಗಿ ನಷ್ಟವಾಗುತ್ತಿದ್ದು, ಇದು ಹೆಚ್ಚಾಗಿ ಕೊಳೆತು ಹೋಗುವಂತಹ ಉತ್ಪನ್ನಗಳಿಗೆ ಅನ್ವಯಿಸುತ್ತದೆ. ಹೀಗಾಗಿ ರೈತರು ಅಧಿಕಕರವಾಗಿ ಬರುವಂತಹ ಲಾಭವನ್ನು ಕಳೆದುಕೊಳ್ಳಬೇಕಾಗಿದೆ. ಇದನ್ನು ತಡೆಯಲು ರೈತರು ಬೇಕಾಬಿಟ್ಟಿಯಾದ ಬೆಲೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕಾದ ಪ್ರಸಂಗ ಎದುರಾಗುತ್ತಿತ್ತು.

ನೂತನ ಕೋಲ್ಡ್ ಸ್ಟೋರೇಜ್ ಸ್ಥಾಪನೆಯಿಂದ ಜಿಲ್ಲೆಯ ಮತ್ತು ಸುತ್ತಮುತ್ತಲಿನ ರೈತರಿಗೆ ತುಂಬಾ ಸಹಾಯಕವಾಗಲಿದ್ದು ಇಲ್ಲಿ ಹೇರಳವಾಗಿ ಬೆಳೆಯಲಾಗುವ ಆಲೂಗಡ್ಡೆ, ಮೆಣಸಿನಕಾಯಿ, ಕಾಯಿಪಲ್ಯ, ದ್ವಿದಳ ಧಾನ್ಯ, ಹಣ್ಣು ಮತ್ತು ಇತ್ಯಾದಿ ಬೆಳೆಗಳನ್ನು ಅನೇಕ ದಿನಗಳವರೆಗೆ ಜಿಲ್ಲೆಯ ರೈತ ಸಮುದಾಯ ಶೇಖರಿಸಿ ಇಡಬಹುದಾಗಿದೆ ಮತ್ತು ಹೀಗೆ ಇಡುವುದರಿಂದ ಇದರ ಗುಣಮಟ್ಟ, ತಾಜಾತನ ಹಾಗೂ ಪೌಷ್ಟಿಕಾಂಶ ಮೌಲ್ಯವನ್ನು ಹೆಚ್ಚಿನ ಕಾಲದವರೆಗೆ ಕಾಪಾಡುವ ನಿಟ್ಟಿನಲ್ಲಿ ಖಂಡಿತವಾಗಿಯೂ ಇಲ್ಲಿನ ರೈತರಿಗೆ ಅನುಕೂಲಕರವಾಗಲಿದೆ ಎಂದು ಜಗದೀಶ ಶೆಟ್ಟರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಡೆದ ಬ್ಯಾಂಕರ್ಸ್ DLCC ಸಭೆಯಲ್ಲಿ ಜಿಲ್ಲಾ ನಬಾರ್ಡ್ ಅಧಿಕಾರಿಗಳಿಗೆ ಬೆಳಗಾವಿಯಲ್ಲಿ ರೈತರಿಗೆ ಅನುಕೂಲವಾಗಲು ಕೋಲ್ಡ್ ಸ್ಟೋರೇಜ್ ಘಟಕ ಸ್ಥಾಪನೆಯ ಬಗ್ಗೆ ವಿಷಯ ಅವಲೋಕಿಸಲು ಸಂಸದರು ಸೂಚಿಸಿದ್ದು ಇಲ್ಲಿ ಸ್ಮರಣೀಯ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ