Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟೋಲ್ ಶುಲ್ಕ ಪಾವತಿ ಬಗ್ಗೆ ಕೇಂದ್ರ ಸಚಿವರಿಗೆ ಪತ್ರ ಬರೆದ ಜಗದೀಶ ಶೆಟ್ಟರ್

ಬೆಳಗಾವಿ : ಬೆಳಗಾವಿ - ಸಂಕೇಶ್ವರ - ಕೊಲ್ಲಾಪುರ - ಕರಾಡ ನಡುವೆ ನಿರ್ಮಾಣಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ವಾಹನ ಸವಾರರು ತಾವು ಮುಟ್ಟಬೇಕಾದ ನಗರಕ್ಕೆ ಹೆಚ್ಚಿನ ಸಮಯಾವಕಾಶ ಬೇಕಾಗುತ್ತಿರುವುದರಿಂದ ಹತ್ತಿರದ ಟೋಲ್ ಪ್ಲಾಜಾದಲ್ಲಿ ಪಾವತಿಸಬೇಕಾದ ಶುಲ್ಕವನ್ನು ಸಾರ್ವಜನಿಕರು ವಿರೋಧಿಸುತ್ತಿರುವುದನ್ನು ಕೇಂದ್ರ ಸಾರಿಗೆ ಸಂಪರ್ಕ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಅವರು ಪತ್ರದ ಮುಖೇನ ವಿಷಯ ತಿಳಿಸಿ ಗಮನ ಸೆಳೆದಿದ್ದಾರೆ.

ಬೆಳಗಾವಿ - ಸಂಕೇಶ್ವರ - ಕೊಲ್ಲಾಪುರ - ಕರಾಡ ನಡುವೆ ರಸ್ತೆಯ ಅಗಲೀಕರಣ ಚಾಲ್ತಿಯಲ್ಲಿದ್ದು ಹಲವು ತಿರುವುಗಳು ಹಾಗೂ ಸಂಪೂರ್ಣವಾಗಿ ತಗ್ಗು ದಿನ್ನೆಗಳಿಂದ ಕೂಡಿದ್ದು ವಾಹನ ಸವಾರರಿಗೆ ತುಂಬಾ ತೊಂದರೆಯಾಗಿ ತಲುಪಬೇಕಾದ ಸ್ಥಳಕ್ಕೆ ನಿಗದಿತ ಸಮಯಕ್ಕಿಂತಲೂ ಎರಡು ಪಟ್ಟು ಹೆಚ್ಚು ಸಮಯ ವ್ಯಯವಾಗುತ್ತಿರುವುದಷ್ಟೇ ಅಲ್ಲದೇ ವಾಹನಗಳು ಸಹ ಕೆಟ್ಟು ಹೋಗುತ್ತಿವೆ. ಹತ್ತಿರದ ಟೋಲ್ ಪ್ಲಾಜಾದಲ್ಲಿ ಪಾವತಿಸಬೇಕಾದ ಶುಲ್ಕಕ್ಕೆ ವಾಹನ ಸವಾರರಿಂದ ವಿರೋಧ ವ್ಯಕ್ತವಾಗುತ್ತಿದೆ.

ಇದೇ ಪರಿಸ್ಥಿತಿಯು ಬೆಳಗಾವಿ - ಪಣಜಿ ರಾಷ್ಟ್ರೀಯ ಹೆದ್ದಾರಿಯ ಖಾನಾಪುರ ಹತ್ತಿರ ನಿರ್ಮಾಣವಾಗುತ್ತಿರುವ ರಸ್ತೆಗೆ ಗಣಿಬೈಲ್ ಟೋಲ್ ಪ್ಲಾಜಾದಲ್ಲಿ ಪಾವತಿಸಬೇಕಾದ ವಾಹನ ಶುಲ್ಕಕ್ಕೆ ಸವಾರರು ಬೇಸರಗೊಂಡಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿದ್ದು ಈ ಹೆದ್ದಾರಿಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಯಾವುದೇ ಟೋಲ್ ಪ್ಲಾಜಾದಲ್ಲಿ ಟೋಲ್ ಪಡೆಯಬಾರದೆಂದು ಸೂಕ್ತ ಸೂಚನೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡುವಂತೆ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸಾರಿಗೆ ಸಂಪರ್ಕ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ವಿನಂತಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ