Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮತ್ತೊಬ್ಬ ಅತ್ಯಾಚಾರಿಗೆ ಜೈಲು ಶಿಕ್ಷೆ ಪ್ರಕಟ

ಬೆಳಗಾವಿ : ಬೆಳಗಾವಿಯ ಪೋಕ್ಸೊ ನ್ಯಾಯಾಲಯ ಮತ್ತೊಬ್ಬ ಅತ್ಯಾಚಾರಿಗೆ ಜೈಲು ಶಿಕ್ಷೆಯನ್ನು ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬಾಲಕಿ ಇನ್ನೂ ಅಪ್ರಾಪ್ತೆ ಇದ್ದರೂ ಆಕೆಯನ್ನು ನಂಬಿಸಿ ಅಪಹರಣ ಮಾಡಿ ಅತ್ಯಾಚಾರ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಪೋಕ್ಸೋ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಈತ ಮದುವೆಯಾಗುವುದಾಗಿ ಬಾಲಕಿಯನ್ನು ನಂಬಿಸಿ ಬೈಕಿನಲ್ಲಿ ಅಪಹರಣ ಮಾಡಿದ್ದ. ತನ್ನ ಸಂಬಂಧಿಕರ ಮನೆಯಲ್ಲಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕಾರಣಕ್ಕಾಗಿ ಆರೋಪಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಿದೆ.

ಖಾಸಬಾಗ ಭಾರತ ನಗರ ಐದನೇ ಕ್ರಾಸ್‌ನ ಆನಂದ ಶಿವಾಜಿ ಜಂತಿಕಟ್ಟಿ (25) ಶಿಕ್ಷೆಗೊಳಗಾದ ಆರೋಪಿ. 2021ರ ಆಗಸ್ಟ್ 9 ರಂದು ಮಧ್ಯಾಹ್ನ 3:00 ರ ಸುಮಾರಿಗೆ ಈತ ಸಂತ್ರಸ್ತೆಯನ್ನು ನಂಬಿಸಿ ತನ್ನ ಬೈಕಿನಲ್ಲಿ ಅಪಹರಿಸಿ ಹಲಗಾದ ತನ್ನ ಚಿಕ್ಕಮ್ಮನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯ ಪಿ ಐ ಹೆಚ್ ವೈ ಕುದ್ರೇಮನಿ ಪ್ರಕರಣ ದಾಖಲಿಸಿದ್ದರು. ವಿನಾಯಕ ಬಡಿಗೇರ ಪ್ರಕರಣದ ತನಿಖೆ ಮುಂದುವರಿಸಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಸಿಎಂ ಪುಷ್ಪಲತಾ ವಿಚಾರಣೆ ನಡೆಸಿದ್ದರು. ಆರೋಪಿಗೆ ಕಲಂ 36ರ ಪ್ರಕಾರ 10 ವರ್ಷ ಜೈಲು ಶಿಕ್ಷೆ,ರೂ. 20 ಸಾವಿರ ದಂಡ, ತಪ್ಪಿದರೆ ಮತ್ತೊಂದು ವರ್ಷ ಜೈಲು ಶಿಕ್ಷೆ, ಕಲಂ 368 ರಡಿ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ರೂ.5,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್