Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಜೈಲು ಶಿಕ್ಷೆ

ಬೆಳಗಾವಿ : ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಬೆಳಗಾವಿಯ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ಆರೋಪಿತನು ಹಾಗೂ ಜಯಮಾಲಾ ಶಿವಪ್ಪ ಅಡಕಿ ಇವರು ಗಂಡ-ಹೆಂಡತಿ ಇದ್ದು, ಇವರ ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು.

ಆರೋಪಿತನು ಜಯಮಾಲಾ ಅಡಕಿ ಇವರ ಮೇಲೆ ಬೈಲಹೊಂಗಲ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಸದರಿ ಪ್ರಕರಣ ಮಾನ್ಯ ನ್ಯಾಯಾಲಯದಲ್ಲಿ ದಿನಾಂಕ: 29-09-2021 ರಂದು ವಿಚಾರಣೆಗಾಗಿ ನಿಗದಿಪಡಿಸಿದ್ದರಿಂದ ಜಯಮಾಲಾ ಅಡಕಿ ಅವರು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಆಗಮಿಸಿ, ಮಾನ್ಯ ನ್ಯಾಯಾಲಯದಲ್ಲಿ ಹಾಜರಾದ ನಂತರ ಮಾನ್ಯ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಬೇರೊಂದು ದಿನಾಂಕಕ್ಕೆ ಮುಂದೂಡಿದಾಗ ಜಯಮಾಲಾ ಅಡಕಿ ಇವರು ನ್ಯಾಯಾಲಯದ ಆವರಣದಲ್ಲಿದ್ದ ಕ್ಯಾಂಟಿನ್ ನಿಂದ ಹೊರಗೆ ಬರುತ್ತಿರುವಾಗ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿತನು ಅವರನ್ನು ಮಚ್ಚಿನಿಂದ ನ್ಯಾಯಾಲಯದ ಆವರಣದಲ್ಲಿ ಎಡಗಡೆ ಕಿವಿಯ ಹತ್ತಿರ, ಬಲಗಡೆ ಭುಜಕ್ಕೆ, ತಲೆಗೆ, ಕುತ್ತಿಗೆಗೆ ಹೊಡೆದು ನೆಲಕ್ಕೆ ಉರಳಿಸಿ ಎಡಗಾಲು ಪಾದ ಕತ್ತರಿಸಿ ಎಡಗೈ ರಟ್ಟೆಗೆ, ಬಲಗೈ ಅಂಗೈಗೆ ಬಲವಾಗಿ ಮಚ್ಚಿನಿಂದ ಕೊಚ್ಚಿ ಭಾರಿ ಗಾಯ ಪಡಿಸಿ ಕೊಲೆ ಮಾಡಲು ಪ್ರಯತ್ನ ಪಟ್ಟ ಅಪರಾಧ ಎಸಗಿದ್ದ‌.

ತನಿಖಾಧಿಕಾರಿಯವರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮಾನ್ಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಳಗಾವಿಯ ಪ್ರಭಾರಿ ನ್ಯಾಯಾಧೀಶರಾದ ಮಾನ್ಯ ಸುಭಾಶ ಸಂಕದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಅವರು ಪ್ರಕರಣ ವಿಚಾರ ಮಾಡಿ ಆರೋಪಿ ಶಿವಪ್ಪ ನಿಂಗಪ್ಪ ಅಡಕಿ ಈತನ ಮೇಲೆ ಆರೋಪಣೆಗಳು ಸಾಬೀತಾಗಿವೆ ಎಂದು ದಿನಾಂಕ: 17-02-2026 ರಂದು ತೀರ್ಪು ನೀಡಿ, ಆರೋಪಿತನು ಭಾರತೀಯ ದಂಡ ಸಂಹಿತೆ ಕಲಂ. 307 ರ ಅಡಿಯಲ್ಲಿ ಎಸಗಿರುವ ಅಪರಾಧದ ಕುರಿತು 10 ವರ್ಷ ಕಾರಾಗೃಹ ಶಿಕ್ಷೆ ಮತ್ತು ರೂ. 25,000/- ದಂಡ ವಿಧಿಸಿ ದಿನಾಂಕ: 21-02-2026 ರಂದು ಪ್ರಕರಣದಲ್ಲಿ ಆದೇಶ ಹೊರಡಿಸಿರುತ್ತಾರೆ.

ಸರಕಾರದ ಪರವಾಗಿ ಕೃಷ್ಣ ನಾರಾಯಣ ಪಾಟೀಲ ಸರ್ಕಾರಿ ಅಭಿಯೋಜಕರು, 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ರವರು ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ