Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಳಿ ಗೂಡಿಗೆ ಜನಾರ್ದನ ರೆಡ್ಡಿ- ಸೋಮವಾರ ಬಿಜೆಪಿ ಸೇರ್ಪಡೆ

 

ಬೆಂಗಳೂರು/ಬಳ್ಳಾರಿ: ಸೋಮವಾರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ(KRPP) ಶಾಸಕ, ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಪಕ್ಷ ಸೇರ್ಪಡೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಬಿಜೆಪಿ (BJP) ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಜನಾರ್ನದ ರೆಡ್ಡಿ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.

ರಾಜ್ಯಸಭೆ ಚುನಾವಣೆಯ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ವಿಧಾನ ಸಭಾ ಚುನಾವಣೆಯಲ್ಲಿ ಕೆಆರ್‌ಪಿಪಿ ಒಂದೇ ಸ್ಥಾನ ಗೆದ್ದಿದ್ದರೂ ಕಲ್ಯಾಣ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಏಟು ನೀಡಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ