Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತಷ್ಟು ಸಂಚಲನ : ನಾಥ್ ಅಪರೇಶನ್ ಗೆ ಪುಷ್ಟಿ ನೀಡಿದ ಜಾರಕಿಹೊಳಿ ಹೇಳಿಕೆ !

 

ಬೆಳಗಾವಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಚುನಾವಣಾ ಪ್ರಚಾರ ಭಾಷಣದಲ್ಲಿ ನೀಡಿರುವ ಕರ್ನಾಟಕ ರಾಜಕಾರಣ ಕುರಿತ ಹೇಳಿಕೆ ಇದೀಗ ಮತ್ತೆ ಬದಲಾವಣೆಯ ಗಾಳಿ ಬೀಸಬಹುದೇ ಎಂಬ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕ ಕೇಂದ್ರೀತವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಸರಕಾರ ಬದಲಾವಣೆಯ ಹೇಳಿಕೆ ಕಾಂಗ್ರೆಸ್ ಸರಕಾರದ ಪಾಲಿಗೆ ಎಚ್ಚೆತ್ತುಕೊಳ್ಳುವಂತಾಗಿದೆ. ತುಸು ಮೈಮರೆತರೆ ಬಿಜೆಪಿ-ಜೆಡಿಎಸ್ ನಾಯಕರು ಆಪರೇಷನ್ ನಡೆಸಿ ಪರ್ಯಾಯ ಸರಕಾರ ರಚನೆಗೆ ಮುಂದಾಗಬಹುದು ಎಂಬ ಸನ್ನಿವೇಶ ತೆರೆ ಮರೆಯಲಿ ಕಂಡುಬರುತ್ತಿದೆ. ತಮ್ಮದೇ ಸರಕಾರ ಇದ್ದರೂ ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಹರಿದು ಬಾರದೇ ಇರುವುದಕ್ಕೆ ಸ್ವತಃ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಒಳಗೊಳಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ರಾಜ್ಯದ ಪ್ರಭಾವಿ ಸಚಿವ ಸತೀಶ ಜಾರಕಿಹೊಳಿ ಅವರು ಚುನಾವಣೆಯ ಬೆನ್ನಲ್ಲೇ ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗಷ್ಟೇ ವಿಪಕ್ಷ ನಾಯಕ ಆರ್​.ಅಶೋಕ್ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ಪತನವಾಗುತ್ತೆ ಎಂದು ದೊಡ್ಡ ಆಪರೇಷನ್ ಸುಳಿವು ನೀಡಿದ್ದರು. ಮಾಜಿ ಸಿಎಂ ಎಚ್​ಡಿಕೆ ಸಹ ಆಗಾಗ, ಕರ್ನಾಟಕ ಅಜಿತ್ ಪವಾರ್ ಯಾರಾಗ್ತಾರೆ ಕಾದು ನೋಡಿ ಎನ್ನುವ ಮೂಲಕ ಚರ್ಚೆಯನ್ನ ಬೇರೆ ದಿಕ್ಕಿಗೆ ಒಯ್ದಿದ್ದರು. ಆದ್ರೆ, ಇದನ್ನು ಕಾಂಗ್ರೆಸ್ ಅಷ್ಟಾಗಿ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಇದೀಗ ಕರ್ನಾಟಕ ಸರ್ಕಾರದ ಪತನದ ವಿಚಾರವಾಗಿ ಖುದ್ದು ಮಹಾರಾಷ್ಟ್ರ ಸಿಎಂ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇತ್ತ ಸತೀಶ್ ಜಾರಕಿಹೊಳಿ ಶಾಸಕರ ಅಸಮಾಧಾನ ಇದ್ದೆ ಇರುತ್ತೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಸರ್ಕಾರ ಪತನ: ಶಿಂಧೆ ಹೇಳಿಕೆ ಬೆನ್ನಲ್ಲೇ ಶಾಸಕರಲ್ಲಿ ಅಸಮಾಧಾನ ಸಹಜ ಎಂದು ಒಪ್ಪಿಕೊಂಡಿದ್ದಾರೆ.

ಬರೊಬ್ಬರಿ 135 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೇರಿದಾಗಿನಿಂದ ಸರ್ಕಾರ ಪತನದ ಮಾತುಗಳು ಕೇಳಿಬರುತ್ತಲೇ ಇವೆ. ಇದೇ ವಿಚಾರ ಈಗ ಮುನ್ನೆಲೆಗೆ ಬಂದಿರುವುದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರ ಮಾತು. ನಾಥ್ ಮಾದರಿ ಆಪರೇಷನ್ ಎಲ್ಲಾ ಕಡೆ ಫೇಮಸ್ ಆಗಿದೆ. ಅದೇ ಮಾದರಿಯ ಆಪರೇಷನ್​ಗೆ ಕರ್ನಾಟಕದಿಂದಲೂ ಆಹ್ವಾನ ಬಂದಿದೆ. ಚುನಾವಣೆ ಬಳಿಕ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದೇನೆ ಎಂದು ಸ್ಫೋಟಕ ಮಾತುಗಳನ್ನ ಆಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ಕಾಂಗ್ರೆಸ್​ ಮನೆಯಲ್ಲಿ ಕಂಪನ ಸೃಷ್ಟಿಸಿದೆ. ಇದರ ಮಧ್ಯ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಶಾಸಕರಲ್ಲಿ ಅಸಮಾಧಾನ ಇದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದು, ಸಂಚಲನ ಮೂಡಿಸಿದೆ.

ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಭೇಟಿ ವಿಶೇಷತೆ ಏನು ಇಲ್ಲ. ಚುನಾವಣೆ ವಿಚಾರವಾಗಿ ಮಾತುಕತೆ ಮಾಡಿದ್ದೇವೆ. ಎಷ್ಟು ಸೀಟ್ ಗೆಲ್ಲುತ್ತೇವೆ ಎಂಬ ಚರ್ಚೆ ಮಾಡಿದ್ದೇವೆ. ಡಿಸಿಎಂ ಬಗ್ಗೆ ಚುನಾವಣೆ ವೇಳೆ ಕೂಗು ಇತ್ತು. ಈಗ ಚುನಾವಣೆ ಮುಗಿದಿದೆ. ಚುನಾವಣೆಗೆ ಅನುಕೂಲ ಆಗಲಿ ಅಂತ ಕೂಗು ‌ಇತ್ತು. ಈಗ ಡಿಸಿಎಂ ಕೂಗು ಇಲ್ಲ. ಸರ್ಕಾರ ಬೀಳಿಸಲು ಸುಮ್ಮನೆ ಹೇಳುತ್ತಾರೆ. ಸರ್ಕಾರ ಏನು ಬಿದ್ದು ಹೋಯ್ತಾ. ಸುಮ್ಮನೆ ಸರ್ಕಾರ ಬೀಳುತ್ತೆ‌ಅಂತಾರೆ. ಶಾಸಕರ ಅಸಮಾಧಾನ ಇದ್ದೆ ಇರುತ್ತೆ. ಆಡಳಿತ ಪಕ್ಷ ಅಂದ ಮೇಲೆ ಅಸಮಾಧಾನ ಸಹಜ ಎಂದರು. ಈ ಮೂಲಕ ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಒಪ್ಪಿಕೊಂಡರು.

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಕೆಲ ವಿಚಾರಕ್ಕೆ ಸತೀಶ ಜಾರಕಿಹೊಳಿ ಪಕ್ಷದ ನಾಯಕರ ನಡೆಗೆ ಮುನಿಸಿಕೊಂಡಿದ್ದರು. ಅಲ್ಲದೇ ತಮ್ಮ ಆಪ್ತ ಶಾಸಕರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದರು. ಈ ಮೂಲಕ ಹೈಕಮಾಂಡ್​ಗೆ ಎಚ್ಚರಿಕೆ ಸಂದೇಶ ರವಾನಿಸಲು ಮುಂದಾಗಿದ್ದರು. ಇದನ್ನು ಅರಿತ ಹೈಕಮಾಂಡ್ ಕೂಡಲೇ ಮಧ್ಯಪ್ರವೇಶಿಸಿ ಸತೀಶ ಜಾರಕಿಹೊಳಿ ಅವರನ್ನು ಸಮಾಧಾನ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದೀಗ ಶಾಸಕರಲ್ಲಿ ಅಸಮಾಧಾನ ಇದೆ ಎಂದು ಬಹಿರಂಗ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಡಿರುವ ಇದೇ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜಕಾರಣದಲ್ಲಿ ಕಳೆದ 20 ವರ್ಷಗಳಲ್ಲಿ ಈ ರೀತಿಯ ಹಲವು ಬೆಳವಣಿಗೆಗಳಾಗಿವೆ. ದೊಡ್ಡ ದೊಡ್ಡ ನಾಯಕರು, ಪಕ್ಷದ ನಿಷ್ಠಾವಂತರು ಎನಿಸಿಕೊಂಡವರೇ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮತ್ತೊಂದು ಪಕ್ಷಕ್ಕೆ ಸೇರಿದ ಉದಾಹರಣೆಗಳಿವೆ. ಮೈತ್ರಿ ಮಾಡಿಕೊಂಡು ರಚಿಸಿದ್ದ ಸರ್ಕಾರಗಳು ಇದ್ದಕ್ಕಿದ್ದಂತೆಯೇ ಪತನವಾಗಿವೆ. ಹೀಗಾಗಿ ಸರ್ಕಾರ ಪತನದ ಮಾತೀಗ ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರಗಳನ್ನು ಹಾಕುವಂತೆ ಮಾಡಿದೆ.

ಏಕನಾಥ್ ಶಿಂಧೆ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಅವರದ್ದು ಭ್ರಮೆ, ಹಗಲುಗನಸು ಎಂದು ವಾಗ್ದಾಳಿ ನಡೆಸಿದ್ದಾರೆ. ಡಿಕೆ.ಶಿವಕುಮಾರ್ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣೆ ಆದ್ಮೇಲೆ ಶಿಂಧೆ ಸರ್ಕಾರ ಇರೋದೇ ಡೌಟ್ ಎಂದು ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಮುಂದೆ ಯಾವ ಬೆಳವಣಿಗೆಗಳು ನಡೆಯುತ್ತವೆ ಎಂದು ಕಾದು ನೋಡಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ