Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಉದ್ಯೋಗ ಮೇಳ

ಬೆಳಗಾವಿ: ಭಾವುರಾವ್ ಕಾಕತಕರ ಕಾಲೇಜಿನಲ್ಲಿ ರೋಟರಿ ಕ್ಲಬ್‌ ಬೆಳಗಾವಿ-ವೇಣುಗ್ರಾಮ ಹಾಗೂ ಬೆಂಗಳೂರಿನ ಸ್ಪೆಕ್ಟಂ ಟ್ಯಾಲೆಂಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ ವತಿಯಿಂದ ಜೂ. 22ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಸಂಜೀವ ದೇಶಪಾಂಡೆ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಉದ್ಯೋಗಕಾಂಕ್ಷಿಗಳಿಗೆ ನೆರವಾಗುವ ದೃಷ್ಟಿಯಿಂದ ಆಯೋಜಿಸಿದ ಮೇಳದಲ್ಲಿ 50ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಇದರಲ್ಲಿ ಕಾರ್ಪೋರೇಟ್, ಎಫ್‌ಎಂಸಿಜಿ, ಆಟೊಮೊಬೈಲ್ ಕಂಪನಿಗಳು, ಸ್ಟಾರ್ಟಪ್‌ಗಳು, ಫಾರ್ಮಾ, ಹಾಸ್ಪಿಟಾಲಿಟಿ, ಟೆಕ್ಸ್‌ಟೈಲ್, ರಿಟೇಲ್‌, ಬ್ಯಾಂಕ್‌, ಫೈನಾನ್ಸಿಯಲ್ ಇನ್‌ಸ್ಟಿಟ್ಯೂಷನ್ಸ್ ಮತ್ತು ಟ್ರಾವೆಲ್ ಆ್ಯಂಡ್ ಟೂರಿಸಂ ಫರ್ಮ್‌ಗಳು ಸೇರಿವೆ. 4 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

ರೋಟರಿಯನ್ ಡಿ.ಬಿ.ಪಾಟೀಲ, ಕಳೆದ ವರ್ಷ ನಡೆದ ಉದ್ಯೋಗ ಮೇಳದಲ್ಲಿ 600 ಮಂದಿಗೆ ಉದ್ಯೋಗ ಸಿಕ್ಕಿದೆ. ಈ ಬಾರಿ ಹೆಚ್ಚಿನ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆಯಿದ್ದು, ಎಸ್‌ಎಸ್‌ಎಲ್‌ಸಿಯಿಂದ ಸ್ನಾತಕೋತ್ತರ ಕೋರ್ಸ್‌ವರೆಗೆ ವ್ಯಾಸಂಗ ಮಾಡಿದವರು ಭಾಗವಹಿಸಬಹುದು. ಮಾಹಿತಿಗೆ ಮೊಬೈಲ್ :8105308804, 9663381838 ಸಂಪರ್ಕಿಸಬಹುದು ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ