Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ರಕರ್ತರಿಂದ ಮಾನವೀಯ ಕರ್ತವ್ಯ : ಶವಕ್ಕೆ ಹೆಗಲು ಕೊಟ್ಟ ಪತ್ರಕರ್ತರು

ಕಾರವಾರ: ಮಂಗಳೂರಿನ ಪತ್ರಕರ್ತರು ವೃದ್ದೆಯ ಶವ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದ ಘಟನೆ ವರದಿಯಾಗಿದೆ.

ಅಂಕೋಲಾ ತಾಲೂಕಿನ ಉಳವರಿ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬುವರು ಕಳೆದ ವಾರ ಸಂಭವಿಸಿದ ಭೂ ಕುಸಿತದ ವೇಳೆ ನೀರುಪಾಲಾಗಿದ್ದು ಅವರ ಮೃತದೇಹ ಮಂಗಳವಾರ ಗಂಗಾವಳಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಪೋಸ್ಟ್ ಮಾರ್ಟಂ ನಡೆಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಆದರೆ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳಿಯ ಆಡಳಿತ, ಶಾಸಕರು ಯಾರು ಸ್ಥಳದಲ್ಲಿ ಇರಲಿಲ್ಲ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದು ಸ್ಥಳದಲ್ಲಿ ಯಾರು ಇರಲಿಲ್ಲ. ಬರುವವರು ಇಲ್ಲದೆ, ರಸ್ತೆ ಸರಿ ಇಲ್ಲದೆ ವೃದ್ದೆಯ ಶವ ಆಂಬುಲೆನ್ಸ್ ನಲ್ಲಿ ಉಳಿದುಕೊಂಡಿತ್ತು. ಕೊಳೆತ ವಾಸನೆಯಿಂದ ಶವ ಹೊರಲು ಯಾರು ಮುಂದೆ ಬರಲಿಲ್ಲ. ಆಗ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ಹೊತ್ತುಕೊಂಡು ಸಾಗಿದರು.
ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ಹೇಳಲು ಮಂಗಳೂರಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ, ಗಿರೀಶ್ ಮಳಲಿ, ಶಿವಶಂಕರ್ ಅಂತ್ಯಸಂಸ್ಕಾರದಲ್ಲಿ ಸಹಕಾರ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ