Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾರ್ಚ್ 5 ರಂದು ಬೆಳಗಾವಿಗೆ ಜೆ.ಪಿ ನಡ್ಡಾ ಆಗಮನ

ಮಾರ್ಚ್ 5 ರಂದು ಬೆಳಗಾವಿಗೆ ಜೆ.ಪಿ ನಡ್ಡಾ ಆಗಮನ

ಬೆಳಗಾವಿ :
ಮಾರ್ಚ್ 5 ರಂದು ಮಂಗಳವಾರ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬೆಳಗಾವಿಗೆ ಆಗಮಿಸುತ್ತಿದ್ದು ಈ ಕುರಿತು ಪೂರ್ವಭಾವಿ ಸಭೆಯನ್ನು ಭಾಜಪ ಗ್ರಾಮಾಂತರ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆಸಲಾಯಿತು.

ಈ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಭಾಜಪ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರು ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಾರ್ಚ್ 5 ರಂದು ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು ಪಕ್ಷದ ವಿವಿಧ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಭಾಗವಹಿಸುವರು ಎಂದು ಹೇಳಿದರು.

ಮಾರ್ಚ್ 5 ಮಂಗಳವಾರದಂದು ಬೆಳಿಗ್ಗೆ ಚಿಕ್ಕೋಡಿಯಲ್ಲಿ ನಡೆಯುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ ಬೆಳಗಾವಿ ನಗರದಲ್ಲಿ ನಡೆಯುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಭಾಗವಹಿಸುವರು, ನಂತರ ಸಾಯಂಕಾಲ ಜಿಲ್ಲೆಯ ಪ್ರಬುದ್ಧರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು.

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು, jjiಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬೆಳಗಾವಿ ಜಿಲ್ಲೆಗೆ ಬರುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟು ಮಾಡಿದೆ. ಎಲ್ಲ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆ ಪಡೆದ ಫಲಾನುಭವಿಗಳಿಗೆ, ಪ್ರಭುದ್ಧರಿಗೆ ಕಾರ್ಯಕ್ರಮದ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಸಂಜಯ್ ಪಾಟೀಲ, ಚಂದ್ರಶೇಖರ ಕವಟಗಿ, ಬಸವರಾಜ್ ಯಂಕಂಚಿ, ಪ್ರಕಾಶ್ ಅಕ್ಕಲಕೋಟ, ಉಜ್ವಲ ಬಡವನಾಚೆ, ಬೆಳಗಾವಿ ಮಹಾನಗರ ಪಾಲಿಕೆ ಉಪ ಮಹಾಪೌರ ಆನಂದ ಹಾಗೂ ಬೆಳಗಾವಿ ಗ್ರಾಮಂತರ ಜಿಲ್ಲೆ , ಮಹಾನಗರ ಜಿಲ್ಲೆಯ ಮುಖಂಡರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ