Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಕ್ರು ಪ್ರಮಾಣ ವಚನ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ 35ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಕ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾ. ವಿಭು ಬಕ್ರು ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ. ಬಕ್ರು ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ವಿ ಕಾಮೇಶ್ವರ ರಾವ್‌ ವೇದಿಕೆಯಲ್ಲಿದ್ದರು.
ಕಳೆದ ಮೇ 26ರಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಜುಲೈ 14ರಂದು ಕೇಂದ್ರ ಸರ್ಕಾರವು ವಿಭು ಬಕ್ರು ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಅಧಿಸೂಚನೆ ಪ್ರಕಟಿಸಿತ್ತು.

ನ್ಯಾಯಮೂರ್ತಿ ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿದ್ದರು. ಅವರು ವಕೀಲರಾಗಿದ್ದ ಅವಧಿಯಲ್ಲಿ ದೆಹಲಿ ಹೈಕೋರ್ಟ್‌, ಸುಪ್ರೀಂ ಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ