Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಡಾಡಿ, ಶೆಟ್ಟರ್, ಜೋಶಿ ಭೇಟಿ ; ಕೇಂದ್ರ ಸಚಿವರಿಗೆ ಬೆಳಗಾವಿಯ ರೈಲ್ವೆ ಯೋಜನೆಗಳ ಮನವರಿಕೆ

ಬೆಳಗಾವಿ: ಸಂಸದ ಜಗದೀಶ ಶೆಟ್ಟರ್, ರಾಜ್ಯಸಭೆ ಸದಸ್ಯ

ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಯೋಜನೆಗಳ ಕುರಿತು ಚರ್ಚಿಸಿದರು.

ನವದೆಹಲಿಯ ಸಚಿವರ ಕಚೇರಿಯಲ್ಲಿ ಚರ್ಚೆ ನಡೆಸಿದ ಸಂಸದ ಶೆಟ್ಟ‌ರ್, 'ಲೋಕಾಪೂರ- ರಾಮದುರ್ಗ-ಸವದತ್ತಿ- ಧಾರವಾಡ ನಡುವೆ ನೂತನ ರೈಲು ಮಾರ್ಗ ರಚನೆಯ ಅಂಗವಾಗಿ ಪ್ರಾರಂಭಿಕವಾಗಿ 'ಮಾರ್ಗ ಸಮೀಕ್ಷೆ' ನಡೆಸಬೇಕು. ಸವದತ್ತಿಯ ರೇಣುಕಾದೇವಿಯ ಲಕ್ಷಾಂತರ ಭಕ್ತಾದಿಗಳ ಅನುಕೂಲಕ್ಕಾಗಿ ಈ ಮಾರ್ಗ ರಚನೆ ತುಂಬಾ ಅವಶ್ಯಕತೆ ಇದೆ' ಎಂದು ಕೇಂದ್ರ ಸಚಿವರಲ್ಲಿ ಮನವರಿಕೆ ಮಾಡಿದರು.

ಬೆಳಗಾವಿ ರಹವಾಸಿಗಳ ಅನಕೂಲಕ್ಕಾಗಿ ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ 'ವಂದೇ ಭಾರತ ರೈಲು' ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ಅನುಕೂಲ ಮಾಡಿ ಕೊಡಬೇಕು. ಅನೇಕ ದಿನಗಳಿಂದ ಈ ಬೇಡಿಕೆ ಕನಸಾಗಿಯೇ ಉಳಿದೆ. ಸಾಧ್ಯವಾದಷ್ಟು ಬೇಗ ನೆರವೇರಿಸಿ ಕೊಡಬೇಕು ಎಂದೂ ಸಂಸದ ಮನವಿ ಮಾಡಿದ್ದಾರೆ.

ಬೆಳಗಾವಿ- ಮಿರಜ್ ನಡುವೆ ದಿನನಿತ್ಯ ಸಂಚರಿಸುವ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಪ್ರತಿ ತಿಂಗಳು ವಿಸ್ತರಿಸುತ್ತ ಬರಲಾಗಿದೆ. ಈ ಸೇವೆಯನ್ನು ಕಾಯಂ ಮಾಡುವ ನಿಟ್ಟಿನಲ್ಲಿ ಅಗತ್ಯ ಆದೇಶ ನೀಡಬೇಕು ಎಂದೂ ಕೋರಿದ್ದಾರೆ.

ಈ ಮೂರು ಬೇಡಿಕೆಗಳ ಬಗ್ಗೆ ಅವಲೋಕಿಸಿದ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ನೂತನ ಲೋಕಾಪುರ- ರಾಮದುರ್ಗ- ಸವದತ್ತಿ- ಧಾರವಾಡ ರೈಲು ಮಾರ್ಗ ಸಮೀಕ್ಷೆ ಕಾರ್ಯ ಪ್ರಾರಂಭಕ್ಕೆ ಆದೇಶಿಸುವ ಬಗ್ಗೆ ಮತ್ತು ಬೆಂಗಳೂರು- ಧಾರವಾಡ ನಡುವೆ ಸಂಚರಿಸುವ 'ವಂದೇ ಭಾರತ' ರೈಲು ಸೇವೆಯನ್ನು

ಬೆಳಗಾವಿ ನಗರದವರೆಗೆ ವಿಸ್ತರಿಸುವ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದರು.

ಬೆಳಗಾವಿ- ಮಿರಜ್ ನಡುವೆ ದಿನನಿತ್ಯ ಸಂಚರಿಸುವ (ತಾತ್ಕಾಲಿಕ) ಪ್ಯಾಸೆಂಜರ್ ರೈಲು ಸೇವೆಯನ್ನು ಕಾಯಂ ಆಗಿ ಒದಗಿಸುವ ಬಗ್ಗೆ ಇಷ್ಟರಲ್ಲಿಯೇ ಅಗತ್ಯ ಕ್ರಮವನ್ನು ಕೈಕೊಳ್ಳಲಾಗುವುದಾಗಿ ಭರವಸೆ ನೀಡಿದರು ಎಂದೂ ಸಂಸದ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ