Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಬಚ್ಚಲು ಮನೆಯಂತಾಗಿದ್ದ ಕಾಕತಿ ಠಾಣೆಗೆ ಒಲಿದು ಬಂತು ಹೊಸ ಕಟ್ಟಡ ಭಾಗ್ಯ..!

Advertisement
ಬಚ್ಚಲು ಮನೆಯಂತಾಗಿದ್ದ ಕಾಕತಿ ಠಾಣೆಗೆ ಒಲಿದು ಬಂತು ಹೊಸ ಕಟ್ಟಡ ಭಾಗ್ಯ..!

ಗುದ್ದಲಿ ಪೂಜೆ ನೇರವೇರಿಸಿದ ಸಚಿವ ಸತೀಶ ಜಾರಕಿಹೊಳಿ.

2.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಠಾಣೆಯ ಹೊಸ ಇಮಾರತು..!

ಬೆಳಗಾವಿ : ಮಳೆಗಾಳ ಆರಂಭವಾದ್ರೆ ಸಾಕು ಬಚ್ಚಲು ಮನೆಯಂತಾಗುತ್ತಿದ್ದ ಕಾಕತಿ ಪೊಲೀಸ್ ಠಾಣೆಗೆ ಕೊನೆಗೂ ಹೊಸ ಕಟ್ಟಡ ಭಾಗ್ಯ ಒಲಿದು ಬಂದಂತಾಗಿದೆ.

ಒಟ್ಟು ಎರಡೂವರೆ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಠಾಣೆಯ ಕಟ್ಟಡದ ಶಂಕುಸ್ಥಾಪನೆಯನ್ನು ಯಮಕನಮರಡಿ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇರವೇರಿಸಿದರು.

ಸೋಮವಾರ ಸಾಯಂಕಾಲ ಕಾಕತಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪೋಲೀಸ್ ಠಾಣೆಯ ಹಿಂಬದಿಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನಂತರ ಜನರ ಸುರಕ್ಷತೆಗಾಗಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಳವಡಿಸಿದ ಸಿಸಿಟಿವಿ ಕ್ಯಾಮರಾಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಪೊಲೀಸ ಕಮೀಷನರ್ ಗುಲಾಬರಾವ ಬೊರಸೆ, ಡಿಸಿಪಿ ರೋಹನ್ ಜಗದೀಶ, ಡಿಸಿಪಿ ನಿರಂಜನ ಅರಸ್,ಎಸಿಪಿ ಗಂಗಾಧರ, ಕಾಕತಿ ಪಿಐ ಸುರೇಶ್ ಶಿಂಗಿ, ಪಿಎಸ್ಐ ಮಂಜುನಾಥ ನಾಯಿಕ, ಮೃತ್ಯುಂಜಯ ಮಠದ, ಸಿಬ್ಬಂದಿ ಲಮಾಣಿ, ಸೇರಿದಂತೆ ಎಲ್ಲ ಹಿರಿಯ ಹಾಗೂ ಕಿರಿಯ ಸಿಬ್ಬಂದಿಗಳು ಹಾಜರಿದ್ದರು.

ಸಚಿವರ ಆಪ್ತ ಸಹಾಯಕ ಮಲಗೌಡ ಪಾಟೀಲ, ಮುಖಂಡರಾದ ಅಪ್ಪಯ್ಯಗೌಡ ಪಾಟೀಲ, ಅಮೃತ ಮುದ್ದಣ್ಣವರ, ಸಿದ್ದು ಸುಣಗಾರ ಸೇರಿದಂತೆ ಅನೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ