Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು: ರಾಜ್ಯದಲ್ಲೇ ಅತ್ಯಧಿಕ

ಕಲಬುರಗಿ: ಸೂರ್ಯನಗರಿ ಎಂದೇ ಹೆಸರಾಗಿರುವ ಕಲಬುರಗಿಯಲ್ಲಿ ಏಪ್ರಿಲ್ 14ರಂದು ರಾಜ್ಯದಲ್ಲೇ ಅತ್ಯಧಿಕವಾದ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ತೀವ್ರ ಬಿಸಿಗಾಳಿಯ ಹಿನ್ನೆಲೆ ಜಿಲ್ಲೆಯಲ್ಲಿ ಉಷ್ಣಾಂಶವು ಗಣನೀಯವಾಗಿ ಹೆಚ್ಚಿದೆ. ಜನಜೀವನದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ 17ರವರೆಗೆ ಜಿಲ್ಲೆಯಲ್ಲಿ ಹೀಟ್ ವೇವ್ ಇರುವ ಸಾಧ್ಯತೆಗಳಿದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಕಲಬುರಗಿ ಜಿಲ್ಲೆಯಾದ್ಯಂತ ಏಪ್ರೀಲ್ 15 ರಿಂದ 17ರ ವರೆಗೆ ಬಿಸಿ ಗಾಳಿ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಹಮಾಮಾನ ಇಲಾಖೆಯು ಹೀಟ್ ವೇವ್ (ಶಾಖದ ಹೊಡೆತ) ಆರೆಂಜ್ ಅಲರ್ಟ್ ನೀಡಿದೆ.

ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಮನೆಯಿಂದ ಹೊರ ಹೋಗುವುದನ್ನು ಸಾಧ್ಯವಾದಷ್ಟು ಮಟ್ಟಿಗೆ ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನಮ್ ಸಲಹೆ ನೀಡಿದ್ದಾರೆ.

'ಬಿಸಿಲಿನಲ್ಲಿ ಹೋಗುವಾಗ ದೇಹಕ್ಕೆ ರಕ್ಷಣಾತ್ಮಕವಾಗಿ ಕನ್ನಡಕಗಳು, ಛತ್ರಿ-ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಬೇಕು. ಪ್ರಯಾಣಿಕರು ತಮ್ಮೊಂದಿಗೆ ನೀರು ತೆಗೆದುಕೊಂಡು ಹೋಗಬೇಕು. ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು' ಎಂದು ಕಿವಿಮಾತು ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ