Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಳವೆ ಬಾವಿಯಿಂದ ಬದುಕಿ ಬಂದ ಸಾತ್ವಿಕ್‌ನನ್ನು ತೊಟ್ಟಿಲಿಗೆ ಹಾಕಿ ಹರಕೆ ತೀರಿಸಿದ ಕಲ್ಲಿನಾಥ ಸ್ವಾಮೀಜಿ

ವಿಜಯಪುರ: ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದು ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಸುರಕ್ಷಿತವಾಗಿ ಬದುಕುಳಿದು ಬಂದಿರುವ ಸಾತ್ವಿಕ್‌ಗೆ ಮರುನಾಮಕರಣ ಮಾಡಲಾಗಿದೆ.

ಸಾತ್ವಿಕ್‌ನ ಸುರಕ್ಷತೆ ಹಾಗೂ ಚೇತರಿಕೆಗಾಗಿ ಆತನ ತಾಯಿ ಸೇರಿ ಸಂಖ್ಯಾತ ಜನರು ಪ್ರಾರ್ಥನೆ ಮಾಡಿದ್ದರು. ಮಾತ್ರವಲ್ಲ ಪೂಜೆ ಪುನಸ್ಕಾರ ಮಾಡುತ್ತಾ ಹರಕೆಯನ್ನು ಹೊತ್ತಿದ್ದರು. ಏ.15ರ ಸೋಮವಾರದಂದು ವಿಜಯಪುರ ಜಿಲ್ಲೆಯ ಕೊಲ್ಹಾರದ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಮರು ನಾಮಕರಣ ಮಾಡಲಾಗಿದೆ. ಸಾತ್ವಿಕ್ ಜೀವಂತವಾಗಿ ಬದುಕಿ ಬರಲಿ ಎಂದು ಸ್ವಾಮೀಜಿಗಳು ಹರಕೆ ಕಟ್ಟಿದ್ದರು.

ಅದರಂತೆ ಸಾತ್ವಿಕ್‌ನನ್ನು ತಾಯಿ ಪೂಜಾ ತೊಟ್ಟಿಲಿಗೆ ಹಾಕಿ ಶಾಸ್ತ್ರೋಕ್ತವಾಗಿ ನಾಮಕರಣದ ಹರಕೆ ನೆರವೇರಿಸಿದ್ದಾರೆ. ಸಿದ್ದಲಿಂಗ ಮಹಾರಾಜರ ಪವಾಡದಿಂದ ನನ್ನ ಮಗ ಬದುಕಿ ಬಂದಿದ್ದಾನೆ. ಹೀಗಾಗಿ ಸಾತ್ವಿಕ್ ಮುಜಗೊಂಡ ಹೆಸರು ಬದಲಿಗೆ ಸಿದ್ದಲಿಂಗ ಎಂಬ ಹೆಸರನ್ನು ನಾಮಕರಣ ಮಾಡಿದ್ದೇವೆ ಎಂದು ತಾಯಿ ಪೂಜಾ ತಿಳಿಸಿದರು.

ಪ್ರತಿ ವರ್ಷ ಸಿದ್ದಲಿಂಗ ಮಹಾರಾಜರ ಪುರಾಣದಲ್ಲಿ ತೊಟ್ಟಲಿನಲ್ಲಿ ಗೊಂಬೆಯಿಟ್ಟು ನಾಮಕರಣ ಶಾಸ್ತ್ರ ನಡೆಯುತ್ತಿತ್ತು‌. ಈ ಬಾರಿ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿ ದುರಂತದಲ್ಲಿ ಸಾವು ಗೆದ್ದು ಬಂದಿರುವ ಸಾತ್ವಿಕ್‌ನನ್ನೇ ತೊಟ್ಟಿಲಿಗೆ ಹಾಕಿ ನಾಮಕರಣ ಶಾಸ್ತ್ರ ಮಾಡಲಾಗಿದೆ. ಸಿದ್ಧಲಿಂಗ ಮಹಾರಾಜರ ಪ್ರತಿರೂಪದಂತೆ ಸಾತ್ವಿಕ್‌ನನ್ನೇ ತೊಟ್ಟಿಲಿಗೆ ಹಾಕಿ ಶಾಸ್ತ್ರೋಕ್ತವಾಗಿ ನಾಮಕರಣ ಮಾಡಲಾಗಿದೆ ಎಂದು ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ತಿಳಿಸಿದರು.

ಸ್ವಾತಿಕ್‌ ತಾಯಿ ಪೂಜಾ ಹರಕೆ ಹೊತ್ತಿದ್ದರು. ಮಗನನ್ನು ಬದುಕಿಸಿಕೊಡುವಂತೆ ದೇವರಲ್ಲಿ ಹರಕೆ ಹೊತ್ತಿದ್ದ ಪೂಜಾ, ಮನೆಯಿಂದ ಮಠದವರೆಗೆ ದೀಡ ನಮಸ್ಕಾರ ಹಾಕಿ, ಮಗುವಿಗೆ ಮರು ನಾಮಕರಣ ಮಾಡುವುದಾಗಿ ಹೇಳಿಕೊಂಡಿದ್ದರು. ಈ ಹರಕೆಯನ್ನು ಏಪ್ರಿಲ್ 28ರಂದು ಲಚ್ಯಾಣ ಗ್ರಾಮದಲ್ಲಿ ನಡೆಯುವ ಸಿದ್ದಲಿಂಗ ಮಹಾರಾಜರ ಜಾತ್ರೆಯಲ್ಲೂ ಮರುನಾಮಕರಣ ಹರಕೆಯನ್ನು ನೆರವೇರಿಸಲಿದ್ದಾರೆ. ಇದಕ್ಕೂ ಮುನ್ನವೇ ಕೊಲ್ಹಾರದ ದಿಗಂಬರೇಶ್ವರ ಮಠದಲ್ಲಿ ಸಾತ್ವಿಕ್‌ಗೆ ತೊಟ್ಟಿಲಿಗೆ ಹಾಕಿ ಸಿದ್ದಲಿಂಗ ಎಂದು ನಾಮಕರಣ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ