Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಹೆಡ್ ಕಾನ್ ಸ್ಟೇಬಲ್ ನಿಧನಕ್ಕೆ ಕಂಬನಿ ಮಿಡಿದ ಪೊಲೀಸರು

 

ಬೆಳಗಾವಿ: ಬೆಳಗಾವಿ ಕಮಿಷನರ್ ವ್ಯಾಪ್ತಿಯ ಕ್ಯಾಂಪ್ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್, ಮೂಲತಃ ಸಂತಿಬಸ್ತವಾಡ ಗ್ರಾಮದವರಾದ ಮಲ್ಲಸರ್ಜ ಅಂಕಲಗಿ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಲ್ಲಸರ್ಜ ಅಂಕಲಗಿ ಅವರು ಎಂದಿನಂತೆ ಕರ್ತವ್ಯ ಮುಗಿಸಿಕೊಂಡು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದಾರೆ. ರವಿವಾರ ಬೆಳಕು ಹರಿದರೂ ಮಲಗಿಯೇ ಇದ್ದು ಏಳದ ಅವರನ್ನು ಮನೆಯವರು ಎಬ್ಬಿಸಲು ಹೋದಾಗ ವಿಷಯ ಬೆಳಕಿಗೆ ಬಂದಿದೆ.

ಅವರ ಅಕಾಲಿಕ ‌ನಿಧನಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ‌ನಿರ್ವಹಿಸುತ್ತಿದ್ದ ಇವರು ಎಲ್ಲ ಸಿಬ್ಬಂದಿಗಳಿಗೆ ಅಚ್ಚು ಮೆಚ್ಚಿನವರಾಗಿದ್ದರು. ಮಲ್ಲಸರ್ಜ ಅವರ ನಿಧನದಿಂದ ಅವರನ್ನು ಅವಲಂಬಿಸಿದ್ದ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ.

ಸಂತಿಬಸ್ತವಾಡದ ಬಡ ಕುಟುಂಬದಲ್ಲಿ ಜನಿಸಿದ ಅವರು, ಕಷ್ಟ ಪಟ್ಟು ಓದಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಕುಟುಂಬಕ್ಕೆ ಆಧಾರವಾಗಿದ್ದರು.
ಅವರ ಪುಟ್ಟ ಮಕ್ಕಳು ಸದ್ಯ ಓದುತ್ತಿದ್ದಾರೆ. ಮಕ್ಕಳ ಓದಿನ ಬಗ್ಗೆ ಅಪಾರ ಕನಸು ಕಂಡಿದ್ದ ಮಲ್ಲಸರ್ಜ ಅಂಕಲಗಿ ಅವರು ಭವಿಷ್ಯದಲ್ಲಿ ಅವರಿಗೆ ಉನ್ನತ ವಿದ್ಯಾಭ್ಯಾಸ ನೀಡಿ ದೊಡ್ಡ ವ್ಯಕ್ತಿಗಳನ್ನಾಗಿ ಮಾಡುವ ಕನಸು ಕಂಡಿದ್ದರು. ಜೊತೆಗೆ ತಾವು ಸಹಾ ಮುಂದಿನ ದಿನಗಳಲ್ಲಿ ಬಡ್ತಿ ಹೊಂದುತ್ತಿರುವ ವಿಷಯವನ್ನು ಸ್ನೇಹಿತರಲ್ಲಿ ಹಂಚಿಕೊಂಡು ಸಂತಸ ಪಡುತ್ತಿದ್ದರು. ಬೆಳಗಾವಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಅವರು ಅಪಾರ ಸ್ನೇಹ ವಲಯವನ್ನು ಸೃಷ್ಟಿಸಿಕೊಂಡಿದ್ದರು. ಹೀಗಾಗಿ ಅವರು ಜನಪ್ರಿಯ ಪೊಲೀಸ್ ಎಂದು ಗುರುತಿಸಿಕೊಂಡಿದ್ದರು ಅವರ ನಿಧನಕ್ಕೆ ಪೊಲೀಸರು ಹಾಗೂ ನಾಗರಿಕರು ಕಂಬನಿ ಮಿಡಿದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ