Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ

 

ಬೆಂಗಳೂರು:
ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ.
ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಆವರು ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ರೂಪದಲ್ಲಿ ಇಡಲಾಗಿದೆ.

ದತ್ತಿ ದಾನಿಗಳ ಆಶಯದಂತೆ ಕನ್ನಡ ಪರ ಹೋರಾಟ ಮಾಡುತ್ತ ನಾಡು ನುಡಿಗೆ ಸೇವೆ ಸಲ್ಲಿಸಿದವರು, ನೆಲ, ಜಲ ಕುರಿತು ಕೃತಿ ರಚಿಸಿದವರು ಹಾಗೂ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಈ ಮೂವರು ಗಣ್ಯರಿಗೆ ಕನ್ನಡ ಕಾಯಕ ದತ್ತಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ) ರೂ. ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠದ ಶ್ರೀಗಳಾದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಗಡಿನಾಡಿನಲ್ಲಿ ಕನ್ನಡ ಉಳಿಸಿ ಬೆಳೆಸುವುದಕ್ಕಾಗಿ ಸಮಾಜಸೇವಾ ದೀಕ್ಷೆಯೊಂದಿಗೆ ಸಾಹಿತ್ಯ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು. 'ಅಥಣೀಶ' ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿ ಪರಿಚಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಾನಂದ ಕಳವೆ ಅವರು ಪರಿಸರ ಸಂರಕ್ಷಣೆ ಕುರಿತು , ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕೇಂದ್ರದಲ್ಲಿ ವಿವಿಧ ಶಿಬಿರಗಳನ್ನು ಏರ್ಪಡಿಸುವುದರ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ಕಳೆದ ೫ ದಶಕಗಳಿಂದ ನಿರಂತರ ತೊಡಗಿಸಿಕೊಂಡ ಹೆಲನ್ ಮೈಸೂರು ಅವರು ಆಧುನಿಕ ರಂಗಭೂಮಿಯಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಿ ಕನ್ನಡದ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದಾರೆ. ೨೦೨೨ನೇ ಸಾಲಿನ ʻಕನ್ನಡ ಕಾಯಕ ದತ್ತಿʼ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ. ಭ ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ. ಎಂ. ಪಟೇಲ್‌ಪಾಂಡು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ