Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿ. 20ರಿಂದ ಮೂರು ದಿನ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ