Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ತಂಟೆ ಬಗ್ಗೆ ಸಿಎಂ ಗಮನ ಸೆಳೆಯಲು ಮುಂದಾದ ಕನ್ನಡ ಸಂಘಟನೆಗಳು 

ಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಬುಧವಾರ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಕನ್ನಡ ಸಂಘಟನೆಗಳು

ಸುದೀರ್ಘವಾಗಿ ಚರ್ಚಿಸಿದವು.
     
ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ನಡೆದ ಚರ್ಚೆಗಳು,ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ
ಅಂಗೀಕಾರಕ್ಕೆ ಆಗ್ರಹಿಸಿ ಕಳೆದ ನೂರು ದಿನಗಳಿಂದಲೂ ನಡೆದಿರುವ ಕನ್ನಡ ಸಂಘಟನೆಗಳ ಹೋರಾಟ,ಪಾಲಿಕೆಯು ಗೊತ್ತುವಳಿ ಅಂಗೀಕರಿಸುವ ಸಂಬಂಧ ರಾಜ್ಯ ಸರಕಾರ ತನ್ನ ಅಭಿಪ್ರಾಯ ತಿಳಿಸಲು ವಿಳಂಬ ಮಾಡುತ್ತಿರುವ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯ,
ಬೆಂಗಳೂರಿನಲ್ಲಿರುವ ಗಡಿ ಸಂರಕ್ಷಣಾ ಆಯೋಗದ ಮುಖ್ಯ ಕಚೇರಿಯನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರಿಸುವ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲು ಸಭೆ
ನಿರ್ಧರಿಸಿತು.
           
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ,ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ,ಮೈನು ಮಕಾನದಾರ ಮುಂತಾದವರು ಸಭೆಯಲ್ಲಿ ಹಾಜರಿದ್ದು ಸಲಹೆ ಸೂಚನೆ ನೀಡಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST