Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಲು ಕನ್ನಡ ಸಂಘಟನೆಗಳ ಪಟ್ಟು

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ನಿರ್ಣಯಗಳನ್ನು ಅಂಗೀಕರಿಸಬೇಕೆಂಬ ಬೇಡಿಕೆಯನ್ನೊಳಗೊಂಡು ಕನ್ನಡ ಸಂಘಟನೆಗಳ ವಿವಿಧ ಹಕ್ಕೊತ್ತಾಯ ಸಂಬಂಧ ಹೋರಾಟವನ್ನು ಮುಂದುವರಿಸಲು ಹಾಗೂ ಏ.2 ನೇ ವಾರ ಮುಖ್ಯಮಂತ್ರಿ, ಗಡಿ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಭೇಟಿಗಾಗಿ 12 ಕನ್ನಡ ಸಂಘಟನೆಗಳ ನಿಯೋಗವನ್ನು ಬೆಂಗಳೂರಿಗೆ ಕರೆದೊಯ್ಯಲು ಸೋಮವಾರ ನಡೆದ ಕನ್ನಡ ಸಂಘಟನೆಗಳ ಸಭೆಯಲ್ಲಿ ನಿರ್ಧರಿಸಲಾಯಿತು.

ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಕೊಳ್ಳಲಾಗಿದೆ.

ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ನಿರ್ಣಯಗಳನ್ನು ಅಂಗೀಕರಿಸುವ ಸಂಬಂಧ ಉಪ ಮಹಾಪೌರ ಹನುಮಂತ ಕೊಂಗಾಲಿ ಅವರು ಕನ್ನಡ ಹೋರಾಟಗಾರ ಬಲರಾಮ ಮಾಸೇನಟ್ಟಿ ಅವರಿಗೆ ನೀಡಿದ ಭರವಸೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಕನ್ನಡ ಸಂಘಟನೆಗಳ ಮುಖಂಡರು ನಿರ್ಣಯಗಳ ಬಗ್ಗೆ ಚರ್ಚಿಸಲು ಯಾರೇ ಆಹ್ವಾನ ನೀಡಿದರೂ ಚರ್ಚೆಗೆ ಸಿದ್ಧವಿರುವದಾಗಿ ತಿಳಿಸಿದರು.

“ಗಡಿವಿವಾದ ಸಂಬಂಧ ಮಹಾಜನ್ ವರದಿಯೇ ಅಂತಿಮ” ಹಾಗೂ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ನಿರ್ಣಯಗಳನ್ನು ಪಾಲಿಕೆಯಲ್ಲಿ ಅಂಗೀಕರಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಕನ್ನಡ ಪರ ಸಂಘಟನೆಗಳು ಪ್ರತ್ಯೇಕವಾಗಿ ಮಂಗಳವಾರದಿಂದ ಮಹಾಪೌರರಿಗೆ ಹಾಗೂ ಉಪ ಮಹಾಪೌರರಿಗೆ ಮನವಿ ಅರ್ಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗಿದ್ದ 50 ಲಕ್ಷ ರೂ.ಗಳ ಅನುದಾನದ ದುರ್ಬಳಕೆ ಬಗ್ಗೆ ಈಗಾಗಲೇ
12 ಕನ್ನಡ ಸಂಘಟನೆಗಳು ಮುಖ್ಯಮಂತ್ರಿಗಳಿಗೆ, ಗಡಿ ಉಸ್ತುವಾರಿ ಸಚಿವರಿಗೆ, ಮುಖ್ಯ ಕಾರ್ಯದರ್ಶಿಗಳಿಗೆ, ಪ್ರವಾಸೋದ್ಯಮ ಕಾರ್ಯದರ್ಶಿಗಳಿಗೆ ದೂರು ನೀಡಿದ್ದು ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ. ಈ ಬಗ್ಗೆ ತಮಗೆ ಅಧಿಕೃತವಾಗಿ ತಿಳಿಸಲಾಗಿದೆ ಎಂದು ಬಲರಾಮ ಮಾಸೇನಟ್ಟಿ ಅವರು ಸಭೆಗೆ ವಿವರಿಸಿದರು.

ಈ ಸಂಬಂಧ ಬೆಂಗಳೂರಿಗೆ ತೆರಳಲಿರುವ ನಿಯೋಗದ ಸಂದರ್ಭದಲ್ಲಿ ವಿಷಯವನ್ನು ಪ್ರಸ್ತಾಪಿಸಲಾಗುವುದೆಂದು ಅಶೋಕ ಚಂದರಗಿ ತಿಳಿಸಿದರು.

ರಾಜ್ಯ ಸರಕಾರ ನೀಡಿದ 7 ಕೋಟಿ.ರೂ.ಗಳ ಅನುದಾನದಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾದ ಕನ್ನಡ ಭವನವನ್ನು ಸರಕಾರ ತನ್ನ ವಶಕ್ಕೆ ತೆಗೆದುಕೊಳ್ಳಬೇಕೆಂಬ ಬೇಡಿಕೆಯ ಬಗ್ಗೆ ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಿದ್ದು ಮುಂದಿನ ದಿನಗಳಲ್ಲಿ ಕನ್ನಡ ಸಂಘಟನೆಗಳ ಬೇಡಿಕೆಯನ್ನು ಮತ್ತಷ್ಟು ತೀವ್ರಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ 2024 ರ ರಾಜ್ಯೋತ್ಸವ ದಿನದಂದು ಪ್ರತಿಷ್ಠಾಪಿಸಲಾಗಿದ್ದ ಹಲ್ಮಿಡಿ ಶಾಸನದ ಪ್ರತಿಕೃತಿಯು ನಾಪತ್ತೆಯಾಗಿದ್ದು ಇದನ್ನು ಒಂದು ವಾರದಳೊಗೆ ಮರು ಸ್ಥಾಪನೆ ಮಾಡಲು ನೀಡಲಾಗಿದ್ದ ಗಡುವನ್ನು ಇನ್ನೊಂದು ವಾರ ಕಾಲ ವಿಸ್ತರಿಸಲು ಸಭೆಯು ನಿರ್ಧರಿಸಿತು.

ಕಿತ್ತೂರು ಕನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೆಗೌಡ ಬಣ) ಜಿಲ್ಲಾಧ್ಯಕ್ಷ ವಾಜೀದ ಹಿರೇಕೋಡಿ, ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳೂಕರ, ಕನ್ನಡ ಹೋರಾಟಗಾರರಾದ ಬಾಳಪ್ಪ ಗುಡಗೇನಟ್ಟಿ, ಸಣ್ಣತಮ್ಮಾ ಮೂಕನವರ, ನಾಗೇಶ ಕೊಪ್ಪದ, ಮಲ್ಲಪ್ಪಾ ಗುಡಗೇನಟ್ಟಿ, ದಯಾನಂದ ಪವಾರ, ಈಶ್ವರಗೌಡ ಪಾಟೀಲ, ಸತೀಶ ನಾಯಕ ಫರಿದಾ ನದಾಫ್, ರಾಣಿ ಬೀಟಿ, ಸಂಗೀತಾ ಕಾಂಬಳೆ ಹಾಗೂ ಅರವಿಂದ ಸಿಂಗ್ ನೇರಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ