Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರೀ ಕುತೂಹಲ..ಕೊನೆಗೂ ಕಾಂತಾರ-1 ಫಸ್ಟ್ ಲುಕ್ ಬಿಡುಗಡೆ

 

ಬೆಂಗಳೂರು:
ಖ್ಯಾತ ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್‌ Kantara A Legend Chapter-1 (ಕಾಂತಾರ–2)ನ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.

ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದೆ. ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ.

ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್‌ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು ಮಹತ್ವದ ಅಂಶ ಬಹಿರಂಗವಾಗಿದೆ.

ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ಬಣ್ಣಿಸಿದೆ.

ಮೂಲಗಳ ಪ್ರಕಾರ ʼಕಾಂತಾರʼ ಪ್ರೀಕ್ವೆಲ್‌ ನಲ್ಲಿ ಪಂಜುರ್ಲಿ ದೈವದ ಮೂಲ ಹಾಗೂ ಹುಟ್ಟಿನ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 301-400 ಕಾಲದ ಕಥೆ ಇರಲಿದೆ ಎನ್ನಲಾಗಿದೆ.

ಮುಂದಿನ ವರ್ಷದ ಬೇಸಿಗೆಯಲ್ಲಿ ಸಿನಿಮಾ ತೆರೆ ಮೇಲೆ ಬರುವ ಸಾಧ್ಯತೆಯಿದೆ.

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಮುಹೂರ್ತ ಕಾರ್ಯಕ್ರಮ ಕುಂದಾಪುರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸೋಮವಾರ ನೆರವೇರಿತು.

ತುಳುನಾಡಿನ ದೈವ ಹಾಗೂ ಆಚರಣೆ ಸುತ್ತ ಸಾಗಿದ ʼಕಾಂತಾರʼ ಕನ್ನಡದಲ್ಲಿ ಹಿಟ್‌ ಆಗಿ, ಪ್ರಾದೇಶಿಕ ಭಾಷೆಯಲ್ಲಿ ರಿಮೇಕ್‌ ಆಗಿ 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿತ್ತು.

ಸಿನಿಮಾದ ಚಾಪ್ಟರ್‌ -1(ಪ್ರೀಕ್ವೆಲ್) ರಿಲೀಸ್‌ ಬರಲಿದೆ ಎಂದು ರಿಷಬ್‌ ಶೆಟ್ಟಿ ʼಕಾಂತಾರʼ 100 ಡೇಸ್‌ ಸಂಭ್ರಮದಲ್ಲಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿದೆ. ಲೋಕೇಷನ್‌ ಹುಡುಕಾಟ, ಸ್ಕ್ರಿಪ್ಟ್‌ ಕೆಲಸ ಮುಗಿಸಿದ ಬಳಿಕ ಸಿನಿಮಾ ತಂಡ ಮುಹೂರ್ತವನ್ನು ನೆರವೇರಿಸಿದೆ.

ಮುಹೂರ್ತದ ಜೊತೆಗೆ ಫಸ್ಟ್‌ ಲುಕ್‌ ರಿಲೀಸ್‌ ಮಾಡಿ, ಸಿನಿಮಾದ ಬಗ್ಗೆ ಹೈಪ್‌ ಹೆಚ್ಚಿಸಿದೆ. ರಿಷಬ್‌ ಶೆಟ್ಟಿ ಕೈಯಲ್ಲಿ ತ್ರಿಶೂಲ ಇಟ್ಟುಕೊಂಡು, ಉದ್ದ ಗಡ್ಡವನ್ನು ಬಿಟ್ಟಿದ್ದಾರೆ. ಇನ್ನೊಂದು ಕೈಯಲ್ಲಿ ಕೊಡಲಿ ರೀತಿಯ ಆಯುಧವನ್ನು ಇಟ್ಟುಕೊಂಡು ರೌದ್ರ ಅವತಾರವನ್ನು ತಾಳಿದ್ದಾರೆ. ಯುದ್ದದಲ್ಲಿ ಹೋರಾಡುವ ರೀತಿ ತೋರಿಸಲಾಗಿದೆ.

7 ಭಾಷೆಯಲ್ಲೂ ಪೋಸ್ಟರ್‌ ರಿಲೀಸ್‌ ಮಾಡಲಾಗಿದೆ. ಅಜನೀಶ್‌ ಅವರ ಮ್ಯೂಸಿಕ್‌ ಟೀಸರ್‌ ನಲ್ಲಿ ವೀಕ್ಷಕರನ್ನು ರೋಮಾಂಚನಗೊಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ