Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ಗೆಲುವನ್ನು ಕುಣಿದು ಸಂಭ್ರಮಿಸಿದ ಕಪಿಲ್‌ದೇವ್,ಗವಾಸ್ಕರ್..!

ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡವು ಟ್ರೋಫಿ ಎತ್ತಿ ಹಿಡಿದಿದೆ. ಇದೂ ಸೇರಿ ಭಾರತವು ಈವರೆಗೆ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಹಾಲಿ, ಮಾಜಿ ಕ್ರಿಕೆಟಿಗರು ಈ ಸಂಭ್ರಮವನ್ನು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ.

1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕ‌ರ್ ಮತ್ತು ತಂಡದ ನಾಯಕತ್ವ ವಹಿಸಿದ್ದ ಕಪಿಲ್ ದೇವ್ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆ ಕುಣಿದು ತಮ. ಸಂತಸ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸುತ್ತಿದ್ದಂತೆ ಇತ್ತ ಮೈದಾನದಲ್ಲಿ ನಿರೂಪಕಿ ಜೊತೆ ಚರ್ಚೆಯಲ್ಲಿ ತೊಡಗಿದ್ದ ಸುನಿಲ್ ಗಬಾಸ್ಕರ್ ಕುಣಿಯುತ್ತಿರುವ ದೃಶ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಲವರು ಹಂಚಿಕೊಂಡಿದ್ದಾರೆ.

ಇತ್ತ, ಟಿ.ವಿ ಲೈವ್ ಚರ್ಚೆಯಲ್ಲಿ ತೊಡಗಿದ್ದ ಕಪಿಲ್ ದೇವ್ ಸಹ ಕುಣಿದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಈವರೆಗೆ ಭಾರತ ತಂಡವು ಈ ವರೆಗೆ ಎರಡು ಏಕದಿನ ವಿಶ್ವಕಪ್, ಎರಡು ಟಿ20 ವಿಶ್ವಕಪ್, ಮೂರು ಚಾಂಪಿಯನ್ಸ್ ಟ್ರೋಫಿ ಸೇರಿ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ.

ಏಳು ಐಸಿಸಿ ಟ್ರೋಫಿ

* ಏಕದಿನ ವಿಶ್ವಕಪ್: 1983, 2011

* ಟೀ-20 ಅಂಕಗಳು: 2007, 2014

ಚಾಂಪಿಯನ್ಸ್ ಟ್ರೋಫಿ : 2002, 2013, 2025

ಮೋದಿ ಸಂತಸ : ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿಹಿಡಿದ ಭಾರತ ತಂಡಕ್ಕೆ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿ, ಸಿನಿ ತಾರೆಯರು, ಮಾಜಿ ಕ್ರಿಕೆಟಿಗರು, ಪಾಕಿಸ್ತಾನದ ಕ್ರಿಕೆಟಿಗರು ಸಹ ಕೊಂಡಾಡಿದ್ದಾರೆ.

ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ಓಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ