Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರದಗಾ ಕನ್ನಡ ಸಮಾವೇಶ : ಮಾತೃ ಭಾಷೆಯನ್ನು ಪ್ರೀತಿಸಿ, ಅನ್ಯಭಾಷೆಗಳನ್ನು ಗೌರವಿಸುವ ಔದಾರ್ಯತೆ ಕನ್ನಡಿಗರದ್ದು

 

ಕಾರದಗಾ (ನಿಪ್ಪಾಣಿ) : ಮಾತೃ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸುವುದು ಕನ್ನಡಿಗರ ಔದಾರ್ಯವಾಗಿದೆ. ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, 8 ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಭಾನುವಾರ 6ನೇ ಕನ್ನಡ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರದಗಾದಲ್ಲಿ ಕನ್ನಡಿಗರು ಮತ್ತು ಮರಾಠಿ ಭಾಷಿಕರು ಅನ್ಯೋನ್ಯವಾಗಿದ್ದಾರೆ. ಇದು ಮುಂದುವರಿಯಬೇಕು. ನಮ್ಮ ಭಾಷೆ, ಕಲೆ, ಸಂಸ್ಕೃತಿಯನ್ನು ಬೆಳಸುವ ಜೊತೆಗೆ ಅನ್ಯರನ್ನೂ ಗೌರವಿಸಿವುದು ನಮ್ಮ ದೊಡ್ಡತನ ಎಂದು ಅವರು ಹೇಳಿದರು.
ಕನ್ನಡ ಭಾಷೆ ಅತ್ಯಂತ ಶ್ರೀಮಂತವಾಗಿದೆ. 8 ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿದೆ. ಕನ್ನಡಿಗರು, ಭಾರತೀಯರು ವಿವಿಧತೆಯಲ್ಲಿ ಏಕತೆನ್ನು ಕಂಡವರು. ಅದರಿಂದಾಗಿಯೇ ಭಾರತ ಇಂದು ವಿಶ್ವ ಗುರುವಾಗಿ ಮುನ್ನಡೆಯುತ್ತಿದೆ. ಕರ್ನಾಟಕ ರಾಜ್ಯ ನಾಮಕರಣದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಇಂತಹ ಸಮಾವೇಶದಲ್ಲಿ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಅತ್ಯಂತ ಅದ್ದೂರಿಯಾಗಿ ಇಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಮುಂದಿನ ವರ್ಷದಿಂದ ರಾಜ್ಯ ಸರಕಾರದಿಂದ ಈ ಸಮಾವೇಶಕ್ಕೆ ನೆರವನ್ನು ಕೊಡಿಸುವ ಜೊತೆಗೆ ಇಲ್ಲಿಯ ಸಂಘಟನೆಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಸಮಾವೇಶದಲ್ಲಿ ಚಿಕ್ಕೊಡಿಯ ಚರಮೂರ್ತಿಮಠದ ಶ್ರೀ ಸಂಪಾದನಾ ಮಹಾಸ್ವಾಮಿಗಳು, ಡೋಣೆವಾಡಿಯ ಆತ್ಮಾಮಾಲಿಕಧ್ಯಾನ ಪೀಠದ ಶ್ರೀ ಸಾಧನಾನಂದ ಮಹಾರಾಜರು, ಸಮಾವೇಶದ ಸರ್ವಾಧ್ಯಕ್ಷರಾದ ಡಾ.ಸರಜೂ ಕಾಟ್ಕರ್, ಮಾಜಿ ಶಾಸಕ ಸುಭಾಷ್ ಜೋಶಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ, ಪಂಕಜ್ ಪಾಟೀಲ, ಅಣ್ಣಾಸಾಹೇಬ್ ಹವಲೆ, ಸುಪ್ರಿಯಾ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ