E-PAPER
26 Nov 2026, 08:52:31 PM|
Gold₹12128/gGold24K ₹12,128/g - 22K ₹11,107/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 28 ರ ವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ- ಬೆಳಗಾವಿಯಲ್ಲಿ ?

ಬೆಂಗಳೂರು: ನೈರುತ್ಯ ಬಂಗಾಳ ಕೊಲ್ಲಿಯಿಂದ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ ಎತ್ತರದಲ್ಲಿ ಬೀಸುತ್ತಿರುವ ಪೂರ್ವ ಮಾರುತಗಳು ಮತ್ತು ದಕ್ಷಿಣ ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಮೇಲೆ ಸುಳಿಗಾಳಿಯ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ನ. 28 ರ ವರೆಗೆ ಮಳೆ ಮುನ್ಸೂಚನೆ ನೀಡುತ್ತದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 28ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಬಗ್ಗೆ
ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮೂರು ದಿನಗಳ ಕಾಲ ನ. 28 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ
ಇರಲಿದೆ, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ನವೆಂಬರ್ 27 ರ ವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 72 ಗಂಟೆಗಳ ಕಾಲ ಆಕಾಶವು ಸಾಮಾನ್ಯವಾಗಿ ಮೋಡ ಕವಿದಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ನಗರದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಲಿದೆ, ಮುಂಜಾನೆ ಹಾಗೂ ರಾತ್ರಿ ವೇಳೆ ತಂಪಾದ ಗಾಳಿ ಬೀಸಲಿದೆ.

ಕರಾವಳಿ ಕರ್ನಾಟಕದಲ್ಲಿ ಗಾಳಿ ಸಹಿತ ಮಳೆ...
ಕರಾಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಹೀಗಾಗಿ, ನವೆಂಬರ್ 28ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಮುನ್ಸೂಚನೆ ನೀಡಿದ್ದಾರೆ.

ಉತ್ತರ ಒಳನಾಡಿನಲ್ಲಿ ಒಣ ಹವೆ...

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದೆ, ಒಣ ಹವೆ ಮುಂದುವರಿಯಲಿದೆ. ಆದರೆ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ತೀವ್ರತೆ ಹೆಚ್ಚಾಗಬಹುದು. ಮಂಜು ಮುಸುಕಿದ ವಾತಾವರಣವನ್ನು ಕಾಣಬಹುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
28 ರಿಂದ ರುದ್ರಾಕ್ಷಿ ಮಠದಲ್ಲಿ ಅನುಭಾವ ದರ್ಶನ ಪ್ರವಚನಸಂವಿಧಾನ ದಿನಾಚರಣೆಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಾಮಾಜಿಕ ನ್ಯಾಯವೇ ಸಂವಿಧಾನದ ಜೀವಾಳ-ಡಿ.ಕೆ.ಶಿವಕುಮಾರ್ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ  ಸಹಯೋಗದಲ್ಲಿ 71 ನೇ  ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯ ವಿವಿಧ ಭಾಗಗಳಲ್ಲಿ ಕಾರ್ಯಕ್ರಮ ಆಯೋಜನೆಬೆಳಗಾವಿ ಆರ್ ಎಲ್ ಎಸ್ : ಸಂವಿಧಾನ ದಿನಾಚರಣೆಕರ್ನಾಟಕದ ಮರಾಠಾ ಸಮುದಾಯದ ಏಕತೆಗೆ ಸಕಲ ಮರಾಠಾ ಸಮಾಜದ ಮಹತ್ವದ ನಿರ್ಧಾರ : ಹಿರಿಯರಿಗೆ ಗೌರವ, ಸಾಧಕರಿಗೆ ಸನ್ಮಾನ; ಫೆಬ್ರವರಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 28 ರ ವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ- ಬೆಳಗಾವಿಯಲ್ಲಿ ?ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ಭೀಕರ ಅಪಘಾತ : ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಸಾವುಲಿಂಗರಾಜ ಕಾಲೇಜಿನ ಎನ್‌ಸಿಸಿ ಘಟಕದಿಂದ ರಕ್ತದಾನ ಶಿಬಿರಉತ್ತರ ಪ್ರದೇಶ ಚುನಾವಣೆ : ಕಾಂಗ್ರೆಸ್ ಕೇಳಿದ್ದ 2 ಕ್ಷೇತ್ರಗಳೂ ಸೇರಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ ಸಮಾಜವಾದಿ ಪಕ್ಷ !