Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

 

ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋುತ್ಯ ಮಾನ್ಸೂನ್‌ ಕುರಿತು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಅಂತಿಮ ವರದಿ ಬಿಡುಗಡೆ ಮಾಡಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ ಸುರಿಯಲಿದೆ ಎಂದು ಅದು ತಿಳಿಸಿದೆ.
ಜೂನ್‌ನಲ್ಲಿ ದೇಶಾದ್ಯಂತ ವಾಡಿಕೆಯಷ್ಟೇ ಮಳೆ ಬೀಳಲಿದೆ. ಜುಲೈನಲ್ಲಿ ಬೀಳುವ ಮಳೆ ವರದಿಯನ್ನು ಜೂನ್‌ ಕೊನೆ ವಾರದಲ್ಲಿ ಐಎಂಡಿ ಬಿಡುಗಡೆ ಮಾಡಲಿದೆ. ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಮೇ 19ರಿಂದಲೇ ಮಾನ್ಸೂನ್‌ ಆರಂಭವಾಗಿದ್ದು, ಸದ್ಯ ಬಂಗಾಳ ಕೊಲ್ಲಿಯ ಮಧ್ಯ, ಈಶಾನ್ಯ ಭಾಗದಿಂದ ಮಾನ್ಸೂನ್‌ ಇನ್ನಷ್ಟು ವ್ಯಾಪಿಸಲು ಬೇಕಾದ ಪೂರಕ ವಾತಾವರಣ ಇದೆ. ಮುಂದಿನ 4 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆ ಇದೆ.

ಪೂರ್ವ ಮುಂಗಾರು ಮಳೆ ಅಧಿಕ
ಮೇ 1ರಿಂದ 27ರ ವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 60 ಮಿ.ಮೀ. ಮಳೆ ಆಗಬೇಕಿತ್ತು. ಆದರೆ, ಈ ವರ್ಷ 127 ಮಿ.ಮೀ. ಆಗಿದ್ದು, ವಾಡಿಕೆಗಿಂತ ಶೇ. 110ರಷ್ಟು ಹೆಚ್ಚು ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಶೇ. 118, ಉತ್ತರ ಕರ್ನಾಟಕದಲ್ಲಿ ಶೇ. 45, ಮಲೆನಾಡಿನಲ್ಲಿ ಶೇ. 64, ಕರಾವಳಿಯಲ್ಲಿ ಶೇ. 55ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಜೂನ್ 1ರಿಂದ 3ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ವಿಜಯನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ