Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಸಭೆ ಯಶಸ್ವಿ

ಬೆಂಗಳೂರು: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಭೆ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ರಾಜ್ಯ ಅಧ್ಯಕ್ಷ ಬಿ. ಸಿದ್ದಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ರಾಜ್ಯದ 32 ಜಿಲ್ಲೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದು, ಸಂಘಟನೆ ಬೆಳಿಸುವ ಉದ್ದೇಶ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ವಿಸ್ತ್ರ ತವಾಗಿ ಚರ್ಚಿಸಲಾಯಿತು.

ಬೆಳಗಾವಿ ಜಿಲ್ಲೆಯ ಹಿರಿಯ ಸಂಘಟಕ ಅಶೋಕ ಅಣ್ಣಿಗೇರಿ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಲಾಯಿತು. ಜೊತೆಗೆ ಸಂಘಟನೆಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ಜಿಲ್ಲೆಯ ತಾಲ್ಲೂಕಿನ ಸಂಘದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ ಡಾ.ಶೇಖರ ಹಲಸಗಿ ಅವರನ್ನು ಕಿತ್ತೂರು ಚನ್ನಮ್ಮ ತಾಲ್ಲೂಕಿನ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಯುಕ್ತ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ ಸಂಘಕ್ಕೆ ಶ್ರಮವಹಿಸಿದ ಮರಿಕಟ್ಟಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಸವರಾಜ ಗಾಣಿಗೇರ ಅವರನ್ನು ಬೆಳಗಾವಿ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯಅಧ್ಯಕ್ಷರು ಸನ್ಮಾನಿಸಿದರು.

ಇನ್ನು ಮುಂದೆ ಬೆಳಗಾವಿ ಜಿಲ್ಲೆಯಲ್ಲಿ ಉತ್ತಮವಾದ ಸಂಘಟನೆ ಮಾಡಿ ಶಿಕ್ಷಕರ ಸಮಸ್ಯೆ ಗಳಿಗೆ ಸ್ಪಂದಿಸುತ್ತ ಸಂಘವನ್ನು ಬಲಪಡಿಸುವಂತೆ ಸೂಚಿಸಿ ಆದೇಶಿಸಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ