Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಯಕಯೋಗಿ ಸ್ವಾಮೀಜಿ ವಿಧಿವಶ

ಹುಬ್ಬಳ್ಳಿ: ಮಂಟೂರು ಅಡವಿ ಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಮನಿಪ್ರ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಗಿನ ಜಾವ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.

ಹೃದಯಾಘಾತಕ್ಕೊಳಗಾಗಿದ್ದ ಸ್ವಾಮೀಜಿಯವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದ ಶ್ರೀಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಹೊತ್ತಿಗೆ ಕೊನೆಯುಸಿರೆಳೆದರು. ಹುಬ್ಬಳ್ಳಿ ತಾಲೂಕಿನ ಮಂಟೂರು ಹಾಗೂ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಅಡವಿ ಸಿದ್ದೇಶ್ವರ ಮಠ, ಹುಬ್ಬಳ್ಳಿ ಹರುಷದೇವರ ಮಠ, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗೆರಕೊಪ್ಪ- ಬೊಪ್ಪಗೊಂಡನಕೊಪ್ಪ ಇಂದುಧರೇಶ್ವರ ಮಠ, ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠ ಹಾಗೂ ಬೀದರ ಜಿಲ್ಲೆ ಬಸವಕಲ್ಯಾಣ ಕೆಳಗಿ ಪೀಠದ ಪೀಠಾಧಿಪತಿಗಳಾಗಿದ್ದರು.

ಮಂಟೂರು ಗ್ರಾಮದ ಗುರುಪಾದಮ್ಮ ಶಿವಜೋಗಯ್ಯನವರ ಮಗನಾಗಿ 1943 ಜುಲೈ 2ರಂದು ಜನಿಸಿದ್ದ ಅವರು ಶ್ರೀಗಳು ತಮ್ಮ ಬಾಲ್ಯ ವಿದ್ಯಾಭ್ಯಾಸವನ್ನು ಮಂಟೂರಿನಲ್ಲಿ ಪೂರ್ಣಗೊಳಿಸಿದ್ದರು. ಶಿವಯೋಗ ಮಂದಿರದಲ್ಲಿ ಅಧ್ಯಯನ ಹಾಗೂ ವಾರಾಣಸಿಯಲ್ಲಿ ಎಂಎ ಸಂಸ್ಕೃತ ಅಧ್ಯಯನ ಮಾಡಿದ್ದರು.

ಮಂಟೂರಿನಲ್ಲಿ ಶಿವಲಿಂಗೇಶ್ವರ ಪ್ರೌಢಶಾಲೆ ಸ್ಥಾಪಿಸಿ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ.
ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಅಡವಿ ಸಿದ್ದೇಶ್ವರ ಮಠವನ್ನು ಭಕ್ತರ ದೇಣಿಗೆ ಹಾಗೂ ಅವಿರತ ಶ್ರಮದಿಂದ ಅಭಿವೃದ್ಧಿಪಡಿಸಿದ್ದಾರೆ. ಭಕ್ತರೊಂದಿಗೆ ಸೇರಿ ರಾಜ್ಯಕ್ಕೆ ಮಾದರಿಯಾಗುವಂತಹ ರಥ ನಿರ್ಮಿಸಿದ್ದಾರೆ.

ವಚನಕಾರ ಅಲ್ಲಮಪ್ರಭುವಿನ ಜನ್ಮಸ್ಥಳ ಶಿಕಾರಿಪುರ ತಾಲೂಕು ಬಳ್ಳಿಗಾವಿಯ ವಿರಕ್ತಮಠವನ್ನು ಅಭಿವೃದ್ಧಿಗೊಳಿಸಿದ್ದಾರೆ.
ನಶಿಸುತ್ತಿದ್ದ ಅಲ್ಲಮಪ್ರಭುವಿನ ಮನೆಯನ್ನು ಅನುಭವ ಮಂಟಪವನ್ನಾಗಿಸಲು ಸಿದ್ಧತೆ ನಡೆಸಿದ್ದರು. ಗ್ರಂಥ ಪ್ರಕಟಣೆಗಳ ಮೂಲಕ ವಚನಗಳ ಸಂರಕ್ಷಣೆಗೆ ಮುಂದಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ