Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉತ್ತಮ ಕೆಲಸ ಮಾಡಿದ್ದ ಕೇಜ್ರಿವಾಲ್, ಮದ್ಯದಂಗಡಿ ತೆರೆದು ಹಾಳಾದ: ಅಣ್ಣಾ ಹಜಾರೆ

 

ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಜನರ ಕೋಪಕ್ಕೆ ಗುರಿಯಾದರು ಎಂದು ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯೊಬ್ಬರು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿಯಾಗಿರುವುದು ಹೆಮ್ಮೆಯ ಸಂಗತಿ. ರೇಖಾ ಗುಪ್ತಾ ಅವರ ಉತ್ತಮ ಆಲೋಚನೆ ಮತ್ತು ಕಾರ್ಯಗಳಿಗೆ ಜನರು ಮತ ಹಾಕಿದ್ದಾರೆ ಎಂದಿದ್ದಾರೆ.

ಹಿಂದಿನ ಮುಖ್ಯಮಂತ್ರಿ(ಅರವಿಂದ ಕೇಜ್ರಿವಾಲ್) ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾದರು. ಅವರು ಉತ್ತಮ ಕೆಲಸ ಮಾಡುತ್ತಿದ್ದರಿಂದ ನಾನು ಅವರ ಬಗ್ಗೆ ಏನು ಮಾತನಾಡಿರಲಿಲ್ಲ. ಆದರೆ, ನಂತರದ ದಿನಗಳಲ್ಲಿ ಅವರು ನಿಧಾನವಾಗಿ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಮತ್ತು ಪರವಾನಗಿಗಳನ್ನು ನೀಡಲು ಪ್ರಾರಂಭಿಸಿದರು. ಇದು ನನಗೆ ಬೇಸರ ತಂದಿತ್ತು ಎಂದು ಹೇಳಿದ್ದಾರೆ. ಹಿಂದಿನಿಂದಲೂ ಮದ್ಯ ಸೇವನೆ ಮತ್ತು ಮಾರಾಟವನ್ನು ಅಣ್ಣಾ ಹಜಾರೆ ವಿರೋಧಿಸುತ್ತಾ ಬಂದಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ಕೇಜ್ರಿವಾಲ್ ಅವರು ಜಾಮೀನಿನಡಿ ಹೊರಗೆ ಬಂದು ಚುನಾವಣೆ ಎದುರಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ ಪರ್ವೇಶ್ ವರ್ಮಾ ಅವರ ಎದುರು ಸೋಲನುಭವಿಸಿದ್ದರು.

ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಅಭೂತಪೂರ್ವ ಜಯಗಳಿಸಿದ್ದ ಬಿಜೆಪಿ, ರೇಖಾ ಗುಪ್ತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿತ್ತು. ಗುರುವಾರ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ