Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಂಪೇಗೌಡ ಪ್ರಶಸ್ತಿ ಘೋಷಣೆ

 

ಬೆಂಗಳೂರು :
ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ.ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ
ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಈ ಪ್ರಶಸ್ತಿ ಜೊತೆಗೆ 5 ಲಕ್ಷ ನೀಡುವ ಪದ್ಧತಿ ನಡೆದುಕೊಂಡು ಬಂದಿದೆ.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ
ಡಾ. ಮಂಜುನಾಥ್ ಅವರಿಂದ ಕಸಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ.

ಇನ್ನು ಕಿರಿಯ ವಯಸ್ಸಿನಲ್ಲೇ ಜೇರೋಧ ಎಂಬ ನವೋದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ನಿತಿನ್ ಕಾಮತ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನವೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಈ ಸಂಸ್ಥೆಯಿಂದ ಬರುವ 25% ರಷ್ಟು ದುಡಿಮೆ ಹಣವನ್ನು ಸಾಮಾಜಿಕ ಸೇವೆಗೆ ಮುಡಿಪಿಟ್ಟಿದ್ದಾರೆ.

ಇನ್ನು ಬೆಂಗಳೂರಿನ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಕೂಡ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದಿತಿ ಅಶೋಕ್ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದರು. ವಿಶ್ವ ಗಾಲ್ಫ್ ಕ್ರೀಡೆಯಲ್ಲಿ ಎತ್ತರದ ಸಾಧನೆ ಮಾಡಿರುವ ಆಟಗಾರ್ತಿ ಅದಿತಿ ಅಶೋಕ್ ಆಗಿದ್ದಾರೆ.

ಈ ಬಾರಿ ಆರೋಗ್ಯ, ಉದ್ದಿಮೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಈ ಮೂವರು ವ್ಯಕ್ತಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರಿಗೆ ನಾಳೆ ವಿಧಾನಸೌಧದಲ್ಲಿ ನಡೆಯಲಿರುವ 514ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕಳೆದ ಸರ್ಕಾರ ಹಾಸನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿತ್ತು ಅದನ್ನು ಅಡ್ಡಿಪಡಿಸಲು ನಾವು ಇಚ್ಛಿಸುವುದಿಲ್ಲ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ನಂತರ ಹಾಸನ ಕಾರ್ಯಕ್ರಮಕ್ಕೆ ತೆರಳುತ್ತೇನೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ