ನವದೆಹಲಿ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ 11 ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ
ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಯಿತು.
:
ಕಾಂಗ್ರೆಸ್ ನಾಯಕಿ ದೀಪದಾಸ್ ಮುನ್ಶಿಯವರು, ವಿ.ಡಿ ಸತೀಶನ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಫಲಿತಾಂಶ ಪ್ರಕಟವಾದ ದಿನದಿಂದ ವಿ.ಡಿ. ಸತೀಶನ್, ಕೆ.ಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಲ ಅವರ ಹೆಸರು ಮಂಚೂಣಿಯಲ್ಲಿತ್ತು.
