Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಚಳಿಗಾಲ‌ ಅಧಿವೇಶನ- ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಥೆ ಕಲ್ಪಿಸಲು ಖಾದರ್ ಸೂಚನೆ

ಬೆಳಗಾವಿ : ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೂಚಿಸಿದರು.

ಸುವರ್ಣ ವಿಧಾನಸೌಧದಲ್ಲಿ ಬುಧವಾರ (ನ.19) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ‌್ 8 ರಿಂದ 20 ರ ವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ‌ ಸಿಬ್ಬಂದಿ ಬದ್ದತೆಯೊಂದಿಗೆ ಕಾರ್ಯ‌ನಿರ್ವಹಿಸುವುದರ ಮೂಲಕ ಅಧಿವೇಶನ ಯಶಸಸ್ವಿಗೊಳಿಸಬೇಕು.

ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ತೆರನಾದ ಸಮಸ್ಯೆಗಳನ್ನು ಕೂಡಲೇ ಸಂಬಂಧಿತರ ಗಮನಕ್ಕೆ ತಂದು ತರುವುದರ ಮೂಲಕ‌ ಸಮಸ್ಯಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.

ದೂರಸಂಪರ್ಕ ಹಾಗೂ ನೆಟವರ್ಕ್ ಸಮಸ್ಯೆಗಳು ತಲೆದೋರದಂತೆ ನಿಗಾವಹಿಸಬೇಕು. ಅಗತ್ಯವಿರುವ ಗಣಕ ಯಂತ್ರ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು.

ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನಕಾರರಿಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸುವುದರ ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಅಗತ್ಯ ಸೌಲಭ್ಯ‌ ಹಾಗೂ ಸೂಕ್ತ ಪೋಲಿಸ್ ಭದ್ರತೆ ಒದಗಿಸಲು‌ ಕ್ರಮ ವಹಿಸಲು ತಿಳಿಸಿದರು.

ಸಾರ್ವಜನಿಕರಿಗೆ ಮಾಹಿತಿ ಕೇಂದ್ರ:

ಅದೇ ರೀತಿ ಸುವರ್ಣ ವಿಧಾನ‌ಸೌಧದಲ್ಲಿ ಸೂಕ್ತ ಭದ್ರತೆ ಹಾಗೂ ಸುಗಮ‌ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಅಧಿವೇಶನ ಸಂದರ್ಭದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರವನ್ನು‌ ಸ್ಥಾಪಿಸಬೇಕು ಎಂದು ಸಭಾಧ್ಯಕ್ಷರಾದ ಖಾದರ್ ಫರೀದ್ ಸೂಚಿಸಿದರು.

ಕಳೆದ‌ ಬಾರಿಯಂತೆ ಈ ಬಾರಿಯೂ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸುವರ್ಣ ವಿಧಾನಸೌಧದ ಆವರಣದಲ್ಲಿ ಕಳೆದ ಬಾರಿ ಶಾಸಕರುಗಳು ಸಸಿಗಳನ್ನು ನೆಟ್ಟಿದ್ದು, ಈ ಬಾರಿಯೂ ಪ್ರತಿ ಶಾಸಕರುಗಳಿಂದ ಸಸಿಗಳನ್ನು ನೆಡಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.

ಅಧಿವೇಶನಕ್ಕೆ ಸಂಬಂಧಿಸಿದಂತೆ ವಿತರಿಸಲಾಗುವ ಪಾಸ್ ಗಳಲ್ಲಿ ಯಾವುದೇ ಗೊಂದಲಗಳಾಗದಂತೆ ನಿರ್ವಹಿಸಬೇಕು. ಪಾಸ್ ವಿತರಣೆಗೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ, ಶಾಲಾ‌ ಮಕ್ಕಳಿಗೆ ಕಲಾಪಗಳ ವೀಕ್ಷಣೆಗೆ ಸೂಕ್ತ ಸಮಯವನ್ನು ನಿಗದಿಪಡಿಸಬೇಕು.

ವಿಧಾನ ಮಂಡಲದ ಕಾರ್ಯಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಶಾಲಾ, ಕಾಲೇಜು ವಿಧ್ಯಾರ್ಥಿಗಳ ಜೊತೆಗೆ ಪೌರ ಕಾರ್ಮಿಕರರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಮಹಿಳೆಯರಿಗಾಗಿ ಅವಕಾಶ ಕಲ್ಪಿಸಲು ಚಿಂತಿಸಲಾಗಿದ್ದು ಈ ಕುರಿತು ಅಗತ್ಯದ ವ್ಯವಸ್ಥೆ ಮಾಡಲು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರುಗಳಿಗೆ, ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಮಾರ್ಷ ಲ್ ಗಳಿಗೆ ಸೂಕ್ತ ಸಾರಿಗೆ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕು.

ಅಧಿವೇಶನ‌ ಸಂದರ್ಭದಲ್ಲಿ ಸಚಿವರು, ಶಾಸಕರು ತಂಗುವ ಹೋಟೆಲ್ ಗಳಲ್ಲಿ ತಜ್ಞ ವೈದ್ಯರ ತಂಡವನ್ನು‌ ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ‌ ಸೌಧದಲ್ಲಿಯೂ ಸಹ ವೈದ್ಯರ ತಂಡವನ್ನು ಸುಸಜ್ಜಿತ ಅಂಬ್ಯಲೆನ್ಸ್ ನೊಂದಿಗೆ ನಿಯೋಜಿಸಲು ತಿಳಿಸಿದರು.

ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ, ಕರ್ನಾಟಕ ವಿಶ್ವ ವಿದ್ಯಾಲಯ ಹಾಗೂ ಅಕ್ಕಮಹಾದೇವಿ ವಿಶ್ವ ವಿದ್ಯಾಲಾಯಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಆಯ್ದ 30 ವಿದ್ಯಾರ್ಥಿಗಳ ತಂಡಕ್ಕೆ ವಿಧಾನ ಮಂಡಲದ ಕಾರ್ಯ ಕಲಾಪಗಳ ಮಾಹಿತಿ ಪಡೆಯಲು ಅನುಕೂಲವಾಗುವಂತೆ ವೀಕ್ಷಣೆಗೆ ಹೆಚ್ಚಿನ ಸಮಯ ನಿಗದಿಪಡಿಸಲಾಗುವುದು. ಅದರ ಪ್ರಕಾರ ಅವರಿಗೆ ಅವಕಾಶವನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು‌ ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪೂರ್ವ ತಯಾರಿ ಕುರಿತು ವಿವರಿಸಿದರು.
ಪ್ರಸಕ್ತ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗಾಗಿ ಕಳೆದ‌ ಸಾಲಿನಂತೆಯೇ ಈ ಬಾರಿಯೂ ಹನ್ನೆರೆಡು ಸಮಿತಿಗಳನ್ನು ರಚಿಸಿದ್ದು, ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪೋಲಿಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ ಅವರು‌ ಮಾತನಾಡಿ, ಅಧಿವೇಶನದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸೂಕ್ತ ಪೋಲಿಸ್ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೋಲಿಸ್ ಭದ್ರತೆಗೆ ಸಂಬಂಧಿಸಿದಂತೆ ಬೇರೆ ಜಿಲ್ಲೆಗಳಿಂದ‌ ಹೆಚ್ಚುವರಿ ಪೋಲಿಸ್ ಸಿಬ್ಬಂದಿಗಳನ್ನು ಅಧಿವೇಶನಕ್ಕೆ ನಿಯೋಜಿಸಲಾಗುತ್ತಿದೆ.‌ ಅಧಿವೇಶನ‌ ಸಂದರ್ಭದಲ್ಲಿ ನಿಯೋಜಿತ ಪೋಲಿಸ್ ಸಿಬ್ಬಂದಿ‌ ಅಧಿಕಾರಿಗಳಿಗಾಗಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಿಧಾನ ಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ರಾಜು(ಆಸೀಫ್) ಸೇಠ, ವಿಧಾನಸಭೆ ಕಾರ್ಯದರ್ಶಿಗಳಾದ ಆರ್. ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಮಹಾಲಕ್ಷ್ಮೀ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ‌ ಪಂಚಾಯತ‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ‌ ಬಸವರಾಜ ಹೊರಟ್ಟಿ ಅವರು ರಾಷ್ಟ್ರೀಯ ಐಕ್ಯತಾ ಪ್ರಮಾಣ‌ ವಚನವನ್ನು ಬೋಧಿಸಿದರು.

ತದನಂತರ ವಿಧಾನಸಭೆ, ವಿಧಾನಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಮತ್ತಿತರ ಸ್ಥಳಗಳನ್ನು ವಿಧಾನಸಭಾಧ್ಯಕ್ಷರು, ಸಭಾಪತಿಯವರು ಪರಿಶೀಲಿಸಿ, ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ