Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖಾದರ್ ಗೆ ಒಲಿದ ಸಭಾಧ್ಯಕ್ಷತೆ ಹುದ್ದೆ

 

ಬೆಂಗಳೂರು:
ಕಾಂಗ್ರೆಸ್ ಪಕ್ಷದ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ಈ ಸಲ ಸಭಾಧ್ಯಕ್ಷ ಹುದ್ದೆ ಬಹುತೇಕ ಒಲಿದು ಬರುವ ಸಾಧ್ಯತೆ ಹೆಚ್ಚಾಗಿದೆ.
ಎಚ್.ಕೆ. ಪಾಟೀಲ. ಆರ್. ವಿ. ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು‌ ಮುಂದಾಗಿದ್ದರು. ಆದರೆ ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ

ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಲಹೆಯಂತೆ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಖಾದರ್ ಒಪ್ಪಿದ್ದಾರೆ.

ಹೆಸರು: ಯು ಟಿ ಅಬ್ದುಲ್ ಖಾದರ್ ಫರೀದ್ ಬಿಎ,ಎಲ್‌ಎಲ್‌ಬಿ

ತಂದೆಯ ಹೆಸರು: ಯು ಟಿ ಫರೀದ್ ಬಿಎ,ಎಲ್‌ಎಲ್‌ಬಿ (1972,1978,1999,2004 ನಾಲ್ಕು ಬಾರಿ ಶಾಸಕರು)

ತಾಯಿಯ ಹೆಸರು : ಯು ಟಿ ನಸೀಮಾ ಫರೀದ್

ಜನ್ಮ ದಿನಾಂಕ : 12-10-1969

ಶೈಕ್ಷಣಿಕ ವಿವರ-

ಯು ಟಿ ಖಾದರ್ ರವರು ತನ್ನಎಲ್‌ಕೆಜಿ ಶಿಕ್ಷಣವನ್ನು ರೋಶನಿ ನಿಲಯದಲ್ಲಿ,ಒಂದರಿಂದ ನಾಲ್ಕನೇ ತರಗತಿ ವರೆಗೆ ಸೈನ್ಟ್ ಜೆರೋಝ,ನಾಲ್ಕನೇ ತರಗತಿಯಿಂದ ಪ್ರೌಢ ಶಿಕ್ಷಣದ ವರೆಗೆ ಸೈನ್ಟ್ ಅಲೋಶಿಯಸ್ ನಲ್ಲಿ ,ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ ಎಸ್‌ಡಿಎಂ ಕಾಲೇಜಿನಲ್ಲಿ ಬಿಎ,ಎಲ್‌ಎಲ್‌ಬಿ ಪದವಿ ಶಿಕ್ಷಣ ಮುಗಿಸಿದರು.

ಹವ್ಯಾಸ : ಬೈಕ್ ಹಾಗೂ ಕಾರ್ ರೇಸ್‌ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮೋಟೋ ರೇಸ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ್ದರು.

ಕ್ರೀಡೆಯಲ್ಲಿ ಕೂಡ ಆಸಕ್ತಿ ಹೊಂದಿದ್ದು ಕ್ರಿಕೆಟ್,ಫೂಟ್ಬಾಲ್,ವಾಲಿಬಾಲ್,ಹಾಕಿ,ಟೆನ್ನಿಸ್ ಹಾಗೂ ಇತರ ಕ್ರೀಡೆಗಳನ್ನು ಆಡುತ್ತಿದ್ದರು.

ರಾಜಕೀಯ ವಿವರ

1990ರಲ್ಲಿ ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,1994 ರಿಂದ 1999ರ ವರೆಗೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ,1999 ರಿಂದ 2001 ರ ವರೆಗೆ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

2003ರಲ್ಲಿ ಘಟಪ್ರಭದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ,2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು.ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಚುನಾವಣಾ ರಾಜಕೀಯ

2008 ರಲ್ಲಿ ತಮ್ಮ ತಂದೆಯವರ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008,2013,2018 ಹಾಗೂ 2023 ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು.ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಗಳಿಸಿದರು.

2013ರ ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯ ನಿರ್ವಹಿಸಿದರು.ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ,ಬೈಕ್ ಅಂಬ್ಯುಲೆನ್ಸ್,108,ಆರೋಗ್ಯಶ್ರೀ,ದಂತ ಭಾಗ್ಯ,ಸರಕಾರೀ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ,ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಕೂಡ ತನ್ನದಾಗಿಸಿ ಕೊಂಡಿದ್ದರು.

ನಂತರ 2016 ರಿಂದ 2018 ರ ತನಕ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ,ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಕ್ರಾಂತಿಕಾರಿ ಯೋಜನೆಗೆ ಚಾಲನೆ ನೀಡಿ ಇತಿಹಾಸ ಸೃಷ್ಟಿಸಿದರು.ಬಿಪಿಎಲ್ ಕಾರ್ಡು ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018ರ ಮೈತ್ರಿ ಸರಕಾರದಲ್ಲಿ ನಗರಾಭಿವ್ರಿದ್ದಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿ ಯಶಶ್ವಿಯಾದರು.ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ,ಕರ್ನಾಟಕ ನಗರನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ,ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ,ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

2021ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023ರವರೆಗೆ ಕಾರ್ಯ ನಿರ್ವಹಿಸಿ ಪ್ರತೀ ಹಂತದಲ್ಲೂ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸೈ ಎನಿಸಿಕೊಂಡರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ