ಖಾನಾಪುರ : ಭಾರಿ ಮಳೆ ಮತ್ತು ಬಿರುಗಾಳಿಗೆ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಂಪೂರ್ಣ ಮೇಲ್ಚಾವಣಿ ಹಾನಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಶಾಸಕ ವಿಠ್ಠಲ ಹಲಗೇಕರ ಅವರು ಶಾಲೆಯ ಪರಿಶೀಲನೆ ಮಾಡಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ಕರೆ ಮಾಡಿ ತಕ್ಷಣ ಶಾಲೆ ದುರಸ್ತಿ ಕೈಗೊಳ್ಳುವಂತೆ ಮನವಿ ಮಾಡಿದರು.
