Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜಕೀಯ ವದಂತಿಗೆ ಕೊನೆಗೂ ತೆರೆ ಎಳೆದ ಕಿಚ್ಚ !

ಖಾಸಗಿ ವೀಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ನಟ ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಬರೆದಿರುವುದು ಯಾರು ಎಂಬುದನ್ನು ಅವರು ಇದೀಗ ಬಹಿರಂಗಪಡಿಸಿದ್ದಾರೆ . ಈ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆದರಿಕೆ ಪತ್ರ ಬರೆದಿರುವುದು ರಾಜಕೀಯದವರಲ್ಲ . ಖಂಡಿತ ಇದನ್ನು ಚಿತ್ರರಂಗದವರೇ ಮಾಡಿಸಿದ್ದಾರೆ . ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ . ಅದಕ್ಕೆ ಹೇಗೆ ಉತ್ತರ ಕೊಡಬೇಕೆಂದು ನನಗೆ ಗೊತ್ತಿದೆ. ಇವೆಲ್ಲ ಕಾನೂನು ಪ್ರಕಾರ ಹೋದರೆ ಒಳ್ಳೆಯದು ಎಂದರು.

ಬೆಂಗಳೂರು:
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಾವು ಇದೀಗ ಎಲ್ಲಾ ಕಡೆ ಕಾವೇರಿದೆ ಈ ನಡುವೆ ಚಲನಚಿತ್ರ ನಟ ಸುದೀಪ್ ರಾಜಕೀಯ ಸೇರ್ಪಡೆ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ಕೇಳಿ ಬಂದ ವದಂತಿಗೆ ಕೊನೆಗೆ ಅವರೇ ತೆರೆ ಎಳೆದಿದ್ದಾರೆ.
ನಾನು ಯಾವ ಪಕ್ಷದಿಂದಲೂ ಸ್ಪರ್ಧೆ ಮಾಡುತ್ತಿಲ್ಲ. ನಾನು ಯಾರ ಪರವೂ ಟಿಕೆಟ್‌ ಕೇಳಿಲ್ಲ. ಟಿಕೆಟ್‌ ಕೊಡಿಸುವಷ್ಟು ಪ್ರಭಾವಿ ನಾನಲ್ಲ ಎಂದು ನಟ ಸುದೀಪ್‌ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ಯಾರಾದರೂ ಟಿಕೆಟ್‌ ಕೇಳಿದರೆ ಹೊಸ ಸಿನಿಮಾ ಬಿಡುಗಡೆ ಆದಾಗ ಸಿನಿಮಾ ಟಿಕೆಟ್‌ ಕೊಡಿಸಬಲ್ಲೆ ಅಷ್ಟೇ. ನಾನು ಯಾರ ಪರವೂ ಅಲ್ಲ. ಆದರೆ, ಸಿನಿಮಾ ಕ್ಷೇತ್ರಕ್ಕೆ ಬಂದಾಗ ನನ್ನ ಕಷ್ಟದ ಕಾಲದಲ್ಲಿ ಕೆಲವರು ನನ್ನ ಜೊತೆ ನಿಂತಿದ್ದರು. ಆ ಕಾರಣಕ್ಕಾಗಿ ನಾನು ಕೆಲವರ ಪರ ನಿಲ್ಲಬೇಕಾಗುತ್ತದೆ. ಉಳಿದಂತೆ ನಾನೊಬ್ಬ ನಟ ಅಷ್ಟೇ. ಅವರಿಗೆ ಟಿಕೆಟ್‌ ಇವರಿಗೆ ಟಿಕೆಟ್‌ ಕೊಡಿಸುತ್ತೇನೆ ಎಂಬುದೆಲ್ಲಾ ಸುಳ್ಳು ಎಂದು ನಟ ಸುದೀಪ್‌ ಸ್ಪಷ್ಟಪಡಿಸಿದರು.

ಎಲ್ಲ ಪಕ್ಷಗಳಲ್ಲೂ ನನಗೆ ಆತ್ಮೀಯರಿದ್ದಾರೆ. ಆದರೆ, ಕೆಲವೊಂದು ಸಂದರ್ಭದಲ್ಲಿ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನನಗೆ ನೆರವಾದವರಿಗೆ ಪುಟ್ಟ ಕೃತಜ್ಞತೆ ಅರ್ಪಿಸುವ ನಿಟ್ಟಿನಲ್ಲಿ ಇಂಥ ಕೆಲವು ನಿಲುವುಗಳನ್ನು ತೆಗೆದುಕೊಳ್ಳುತ್ತೇನೆ. ಅದು ಏನು ಎಂಬುದನ್ನೂ ಹೇಳುತ್ತೇನೆ ಎಂದರು.

ಈ ನಡುವೆ ಸುದೀಪ್‌ ಅವರಿಗೆ ಬಂದಿರುವ ಅನಾಮಧೇಯ ಬೆದರಿಕೆ ಪತ್ರದ ಬಗೆಗೂ ತನಿಖೆ ನಡೆಯುತ್ತಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದನ್ನು ಸಿಸಿಬಿಗೆ ವರ್ಗಾಯಿಸುವ ಬಗ್ಗೆ ಪೊಲೀಸರು ಚಿಂತನೆ ನಡೆಸಿದ್ದಾರೆ.

‘ಅನಾಮಧೇಯ ಬೆದರಿಕೆ ಪತ್ರ ಬಂದಿದೆ ಎಂದ ಮಾತ್ರಕ್ಕೆ ಅದನ್ನು ನಿರ್ಲಕ್ಷಿಸಲಾಗದು. ಅದಕ್ಕೆ ಯಾವ ಮಾರ್ಗದಿಂದ ಪ್ರತಿಕ್ರಿಯಿಸಬೇಕೋ ಅಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ಕಾನೂನು ಕ್ರಮ ತೆಗೆದುಕೊಳ್ಳುವುದು ನಿಶ್ಚಿತ. ಏಕೆಂದರೆ ನನಗೆ ಈ ರೀತಿ ಮಾಡಿದವರು ನಾಳೆ ಬೇರೆಯವರಿಗೂ ಹೀಗೆ ಮಾಡಬಾರದಲ್ಲವೇ ಎಂದು ಸುದೀಪ್‌ ನುಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ