Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ಷುಲ್ಲಕ ಕಾರಣಕ್ಕೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕೊನೆಗೂ ಆರೋಪಿ ಬಂಧನ

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇವಗಾಂವದಲ್ಲಿ ನಡೆದಿದೆ. ಪ್ರಕರಣದ ಜಾಡು ಹಿಡಿದ ಕಿತ್ತೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    
ಹತ್ಯೆಯಾದ ವ್ಯಕ್ತಿಯನ್ನು ದೇವಗಾಂವ
ಗ್ರಾಮದ ನಿವಾಸಿ ಮಹಾಂತೇಶ ನಿಂಗಪ್ಪ ಹುಚ್ಚನವರ (52) ಎಂದು ಗುರುತಿಸಲಾಗಿದೆ.
 ಮೇ 6 ರಂದು ನಸುಕಿನ ಸುಮಾರು 2:30 ಗಂಟೆ ಸಮಯದಲ್ಲಿ ದೇವಗಾಂವ ಗ್ರಾಮದ
ಬಸ್ ನಿಲ್ದಾಣದ ಹತ್ತಿರವಿರುವ ಕಾಳಾರ ಎಂಬುವವರ ಮನೆಯ ಮುಂದೆ ಈ ಕೃತ್ಯ ನಡೆದಿದೆ. 

ಮೃತ ಮಹಾಂತೇಶ ಅವರು ಆರೋಪಿ ಪ್ರಕಾಶ ಕಲ್ಲಪ್ಪ ಕಾಳಾರ ಎಂಬುವವರ ಮನೆಯಲ್ಲಿ ಮಲಗಿದ್ದರು. ಈ ವೇಳೆ "ನನ್ನ
ಮನೆಯಲ್ಲಿ ಏಕೆ ಮಲಗಿದ್ದೀಯಾ?" ಎಂಬ ವಿಷಯವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ
ಹೋದಾಗ, ಆರೋಪಿ ಪ್ರಕಾಶ ಕಾಳಾರನು ಮಹಾಂತೇಶನನ್ನು ಮನೆಯ ಬಳಿ ಇದ್ದ ಕಲ್ಲನ್ನು ತಲೆಯ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. 
   
ಈ ಬಗ್ಗೆ ಮೃತನ ಸಂಬಂಧಿಕ ರಾಜು ಪುಂಡಲೀಕ ಹುಚ್ಚನವರ (ಸಾ: ದೇವಗಾಂವ ನೀಡಿದ ದೂರಿನ
ಮೇರೆಗೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಕಿತ್ತೂರು ಪೊಲೀಸರು ಆರೋಪಿ ಪ್ರಕಾಶ ಕಲ್ಲಪ್ಪ
ಕಾಳಾರನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯ ಮೇಲೆ BNS-2023 ರ ಕಲಂ 103(1) ರ ಅಡಿಯಲ್ಲಿ (ಕೊಲೆ
ಪ್ರಕರಣ) ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
  
ಕಾರ್ಯಾಚರಣೆಯಲ್ಲಿ   ಬೈಲಹೊಂಗಲ ಡಿಎಅ್ ಪಿ
 ಡಾ. ವೀರಯ್ಯ ಹಿರೇಮಠ  ಇವರ
ಮಾರ್ಗದರ್ಶನದಲ್ಲಿ ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ ಐ ಪ್ರವೀಣ ಆರ್ ಗಂಗೋಳ ಮತ್ತು ಕಿತ್ತೂರ ಠಾಣೆಯ ಸಿಬ್ಬಂದಿಗಳು ಆರೋಪಿತನ ಬಂಧನಕ್ಕೆ ಶ್ರಮಿಸಿರುತ್ತಾರೆ. 
    
ತಂಡದ ಈ ಕಾರ್ಯಕ್ಕೆ
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಶ್ಲಾಘಿಸಿರುತ್ತಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ